ಬೆಳೆ ಕಟಾವು ಸಮೀಕ್ಷೆ ಕೈಗೊಳ್ಳದಿದ್ದಲ್ಲಿ ಶಿಸ್ತು ಕ್ರಮ : ಪಿ. ಸುನೀಲ್ ಕುಮಾರ್

ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಡಿ ಬೆಳೆ ಕಟಾವು : ಸಭೆ ಕೊಪ್ಪಳ ಜ. : ಬೆಳೆ ಕಟಾವುಯಡಿ ನಿಗದಿತ ಅವಧಿಯೊಳಗೆ ಸಮೀಕ್ಷೆ ಕೈಗೊಳ್ಳದಿದ್ದಲ್ಲಿ ಮತ್ತು ನಷ್ಟಗೊಳಿಸಿದ್ದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಜಿಲ್ಲೆಯ ಗ್ರಾ.ಪಂ. ಪಿಡಿಓ, ತಾ.ಪಂ. ಇಓ., ತಹಶೀಲ್ದಾರ, ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಡಿ ಬೆಳೆ ಕಟಾವು ಕುರಿತು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಸೋಮವಾರದಂದು ಆಯೋಜಿಸಲಾದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೈತರ ಅನುಕೂಲಕ್ಕಾಗಿ “ಬೆಳೆ ದರ್ಶಕ ಆ್ಯಪ್” ಇದೆ. ಇದರ ಉದ್ದೇಶಗಳು ಮೊದಲಿಗೆ ರೈತರಿಗೆ ತಿಳಿಸಬೇಕು. ಬೆಳೆ ನಷ್ಟ, ಕಟಾವು ಇತ್ಯಾದಿ ಕುರಿತು ಕೆಲ ಅಧಿಕಾರಿಗಳು ಅಂದಾಜು ಪಟ್ಟಿಯನ್ನು ನೀಡುತ್ತಿದ್ದಾರೆ. ಬೆಳೆ ನಷ್ಟವಾಗಿದ್ದಲ್ಲಿ ಸರ್ವೆ…

Read More