ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ – ಸುದ್ದಿ- ‘ಊಟಕ್ಕೆ ಮೊದಲು ಉಪ್ಪಿನಕಾಯಿ’ ಅರ್ಪಣೆ

ಕೊಪ್ಪಳ: ನಗರದ ಕೊಪ್ಪಳದ ಸಂಸ್ಥಾನ ಶ್ರೀ ಗವಿಮಠದ ಮಹಾರಥೋತ್ಸವಜನೆವರಿ ೨೨ ರಂದುವ ಜರುಗುವ ಅಂಗವಾಗಿ ಶ್ರೀ ಗವಿಮಠದ ಆವರಣದ ಮುಂಭಾಗದಲ್ಲಿನ ಸುಮಾರು ೧೨ ಎಕರೆ ವಿಸ್ತೀರ್ಣದ ಮೈದಾನದಲ್ಲಿ ೯೦೦ ರಿಂದ ೧೦೦೦ ಅಂಗಡಿಗಳಿಗೆ ವ್ಯವಸ್ಥೆ ಮಾಡಲಾಗಿದೆ. ಈ ವಿಶಾಲ ಆವರಣದಲ್ಲಿ ವೈವಿಧ್ಯಮಯವಾದ ಅಂಗಡಿ-ಮುಂಗಟ್ಟುಗಳು ತೆರದುಕೊಳ್ಳಲಿವೆ. ಈ ಎಲ್ಲ ಅಂಗಡಿ ಮುಂಗಟ್ಟುಗಳ ಮಹಾದ್ವಾರಗಳು ಶ್ರೀಗವಿಮಠದ ಸಂಸ್ಥಾಪಕ ಶಿವಯೋಗಿಗಳಾದ ರುದ್ರಮುನಿ ಮಹಾಸ್ವಾಮಿಗಳು, ಶಿವಶಾಂತವೀರ ಮಹಾಸ್ವಾಮಿಗಳು, ಮರಿಶಾಂತವೀರ ಮಹಾಸ್ವಾಮಿಗಳು ಹಾಗೂ ಗವಿಸಿದ್ಧೇಶ್ವರ ಮಹಾಸ್ವಾಮಿಗಳ ಹೆಸರಿನಲ್ಲಿ ನಿರ್ಮಾಣಗೊಳ್ಳುಲಿದ್ದೂ ಅವು ಅತ್ಯಾಕರ್ಷಕವಾಗಿ ನೋಡುಗರ ಕಣ್ಮನಗಳನ್ನು ಸೆಳೆಯುವಲ್ಲಿ ಸಫಲವಾಗಬಲ್ಲವು. ಈ ಬೃಹತ್ ಮಹಾದ್ವಾರಗಳ ಮುಖೇನ ಜನರಿಗೆ ರಹದಾರಿ ಕಲ್ಪಿಸಿಕೊಡಲಾಗುವದು. ಈ ವಿಶಾಲ ಆವರಣದಲ್ಲಿ ಪ್ರತಿವರ್ಷದಂತೆ ಜಾತ್ರೆ ಆವರಣದ ಮಳಿಗೆಗಳಲ್ಲಿ ೧೨ ಸಾಲುಗಳಿದ್ದು, ಪ್ರತಿ ಸಾಲುಗಳ ಮಧ್ಯ ಜನಸಂದಣಿ ಆಗದಂತೆ ಸಮತಟ್ಟಾದ ರಸ್ತೆಗಳನ್ನು ನಿರ್ಮಿಸಲಾಗಿದೆ. ಪ್ರತಿ ಸಾಲಿನಲ್ಲಿರುವ ಅಂಗಡಿಗಳಿಗೆ ಕ್ರಮ ಬದ್ದವಾದ ಕ್ರಮ ಸಂಖ್ಯೆಯನ್ನು ಸಹ ಕೊಡಲಾಗಿದೆ.…

Read More