ಎಸ್ಸಿ – ಎಸ್ಟಿ ನೌಕರರಿಗೆ ಭಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಸಚಿವ ಸಂಪುಟ ಸಭೆ ತೀರ್ಮಾನ

ಬೆಂಗಳೂರು , ಜ . 30 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ( ಎಸ್ಸಿ – ಎಸ್ಟಿ ) ನೌಕರರಿಗೆ ಭಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ . ಬುಧವಾರ ವಿಧಾನಸೌಧದ ಸಂಪುಟ ಸಭಾ ಮಂದಿರದಲ್ಲಿ ಸಿಎಂ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೇಲ್ಕಂಡ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆ ಬಳಿಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು . ಕರ್ನಾಟಕ ( ರಾಜ್ಯದ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ) ಮೀಸಲಾತಿ ಆಧಾರದ ಮೇಲೆ ಭಡ್ತಿ ಹೊಂದಿರುವ ಸರಕಾರಿ ನೌಕರರಿಗೆ ತತ್ಪರಿಣಾಮದ ಜೇಷ್ಠತೆಯನ್ನು ವಿಸ್ತರಿಸುವ ಅಧಿನಿಯಮ – 2017ನ್ನು ಜಾರಿಗೊಳಿಸಲು ಸಂಪುಟ ಒಪ್ಪಿಗೆ ನೀಡಿದೆ . ವಿಧಾನ ಮಂಡಲ ಉಭಯ ಸದನಗಳಲ್ಲಿ ಅಂಗೀಕೃತವಾಗಿದ್ದ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ…

Read More