ಮತದಾನ ಜಾಗೃತಿ ಅಭಿಯಾನಕ್ಕೆ ಸಂಜೀವ ವಿ. ಕುಲಕರ್ಣಿ ಅವರಿಂದ ಚಾಲನೆ

ಕೊಪ್ಪಳ ಏ  ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಮತದಾನದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕೊಪ್ಪಳ ನಗರಾದ್ಯಂತ ಮಂಗಳವಾರದಂದು ಆಯೋಜಿಸಲಾದ ಬೃಹತ್ ಮತದಾನ ಜಾಗೃತಿ ಅಭಿಯಾನಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಂಜೀವ ವಿ. ಕುಲಕರ್ಣಿ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನಿಡಿದರು. ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಶಾಲಾ ಕಾಲೇಜು ಸಂಸ್ಥೆಗಳು ಮತ್ತು ಜಿಲ್ಲಾ ಸ್ವಿÃಪ್ ಸಮಿತಿ ವತಿಯಿಂದ ಜಿಲ್ಲಾ ನ್ಯಾಯಾಲಯ ಆವರಣದಿಂದ ನಗರದ ಅಶೋಕ ವೃತ್ತದವರೆಗೆ ಮತದಾನ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…

Read More