ಮಾವು ಮೇಳ : ರೈತರಿಂದ ನೇರ ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕ ಹಣ್ಣು

ಕೊಪ್ಪಳ ಮೇ. : ರೈತರಿಂದ ನೇರವಾಗಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕವಾಗಿ ಮಾಗಿಸಿದ ಮಾವಿನ ಹಣ್ಣುಗಳನ್ನು ಯೋಗ್ಯ ಬೆಲೆಗೆ ತಲುಪಿಸುವ ಉದ್ದೆÃಶದಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೊಪ್ಪಳ ಜಿಲ್ಲೆಯಲ್ಲಿ ಮಾವು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ ಎಂದು ಕೊಪ್ಪಳ ತೋಟಗಾರಿಕೆ ಇಲಾಖಾ ಉಪನಿರ್ದೇಶಕ ಕೃಷ್ಣ ಉಕ್ಕುಂದರವರು ತಿಳಿಸಿದ್ದಾರೆ. ಮಾವು ಪ್ರದರ್ಶನ ಮೇಳವನ್ನು ಕೊಪ್ಪಳ ತೋಟಗಾರಿಕೆ (ಜಿಪಂ) ಇಲಾಖೆ ಮತ್ತು ಬೆಂಗಳೂರು ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರಾಟ ಮಂಡಳಿ ನಿಯಮಿತ(ನಿ), ಇವರ ಸಂಯುಕ್ತಾಶ್ರಯದಲ್ಲಿ ಮೇ. 08 ರಿಂದ 15 ರವರೆಗೆ ಕೊಪ್ಪಳ ನಗರದ ಎಲ್‌ಐಸಿ ಆಫಿಸ್ ಎದುರುಗಡೆ ಇರುವ ತೋಟಗಾರಿಕೆ ಇಲಾಖೆ ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮೇಳದ ಮೂಲ ಉದ್ದೆÃಶ; ರೈತರಿಂದ ಗ್ರಾಹಕರಿಗೆ ನೇರವಾಗಿ ಉತ್ತಮ ಗುಣಮಟ್ಟದ ಮತ್ತು ನೈಸರ್ಗಿಕವಾಗಿ ಮಾಗಿಸಿದ ಮಾವಿನ ಹಣ್ಣನ್ನು ತಲುಪಿಸುವುದು. ಕ್ಯಾಲ್ಸಿಯಂ ಕಾರ್ಬೈಡ್‌ನಂತಹ ಹಾನಿಕಾರಕ ರಾಸಾಯನಿಕಗಳನ್ನು ಬಳಸದೇ…

Read More