ಡಿಪ್ಲೊಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ ಕೋರ್ಸ: ಅರ್ಜಿ ಆಹ್ವಾನ

ಕೊಪ್ಪಳ ಮೇ.:: ರಾಯಚೂರು ಜಿಲ್ಲೆಯ ಲಿಂಗಸೂರಿನ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ ಪ್ರಸಕ್ತ ಸಾಲಿನ ಡಿಪ್ಲೊಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ ಕೋರ್ಸಿನ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ)ವು ಈ ಭಾಗದ ಯುವಕರಿಗೆ ಉನ್ನತ ಕೌಶಲ್ಯಾಧಾರಿತ ತಾಂತ್ರಿಕ ತರಬೇತಿಗಳನ್ನು ನಡೆಸುತ್ತಿದೆ. ಸಂಸ್ಥೆಯು ಪ್ರಸಕ್ತ ಸಾಲಿನ ಡಿಪ್ಲೊಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ (ಡಿಟಿಡಿಎಂ) ಕೋಸಿಗೆ ಎಸ್.ಎಸ್.ಎಲ್.ಸಿ ಅಥವಾ ಐಟಿಐ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಈ ಕೋರ್ಸಿಗೆ ಸರ್ಕಾರ ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ (ಎಐಸಿಟಿಇ) ಮಾನ್ಯತೆಯಿರುತ್ತದೆ. ಡಿಟಿಡಿಎಂ ಕೋರ್ಸ್ 3+*1 ವರ್ಷ ಅವಧಿಯದ್ದಾಗಿದ್ದು, ಮೊದಲ 3 ವರ್ಷ ಸಂಸ್ಥೆಯಲ್ಲಿ ತರಬೇತಿ ನೀಡಲಾಗುವುದು. ನಂತರ 4ನೇಯ ವರ್ಷ, ಪ್ರತಿಷ್ಠಿತ ಕೈಗಾರಿಕೆಗಳಲ್ಲಿ ಕಡ್ಡಾಯ ಕೈಗಾರಿಕಾ ತರಬೇತಿಗಾಗಿ…

Read More