ಸಾಮಾಜಿಕ ಸುರಕ್ಷಾ (ಸಂಹಿತೆ) ಕಲ್ಯಾಣ ಮಸೂದೆ-೨೦೧೮ಯನ್ನು ಕೈಬಿಡಲು ಆಗ್ರಹಿಸಿ ಕಟ್ಟಡ ಕಾರ್ಮಿಕರಿಂದ ಜಿಲ್ಲಾಧಿಕಾರಿಗೆ ಮನವಿ

ಕೊಪ್ಪಳ:ಆ.೯: ಈಗಾಗಲೇ ನೋಟು ಅಮಾನ್ಯೀಕರಣ ಹಾಗೂ ಜಿಎಸ್‌ಟಿ ನೀತಿಗಳನ್ನು ಜಾರಿ ಮಾಡಿ ಕೋಟ್ಯಾಂತರ ಕಟ್ಟಡ ಕಾರ್ಮಿಕರನ್ನು ನಿರುದ್ಯೋಗಿಗಳನ್ನಾಗಿಸಿದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಇದೀಗ ಸಾಮಾಜಿಕ ಸುರಕ್ಷತಾ ಮಸೂದೆ-೨೦೧೮ಯನ್ನು ಜಾರಿಗೊಳಿಸುವ ಮೂಲಕ ನಾಲ್ಕು ಕೋಟಿ ಕಟ್ಟಡ ನಿರ್ಮಾಣ ಕಾರ್ಮಿಕರು ಈಗ ಪಡೆಯುತ್ತಿರುವ ಹಲವು ಸೌಲಭ್ಯಗಳನ್ನು ಕಸಿಯಲು ಹೊರಟಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ವಿವಿಧ ಕಟ್ಟಡ ಕಾರ್ಮಿಕ ಸಂಘಗಳ ಮುಖಂಡರು ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಕೇಂದ್ರ ಸರಕಾರದ ಈ ನೀತಿಯ ವಿರುದ್ಧ ದೇಶವ್ಯಾಪಿ ಮುಷ್ಕರಕ್ಕೆ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರು ಸನ್ನದ್ದರಾಗುತ್ತಿದ್ದಾರೆ. ದೇಶದ ಕಾರ್ಮಿಕ ವರ್ಗದ ಸ್ವಾತಂತ್ರ್ಯ ಪೂರ್ವದಿಂದ ಹೋರಾಡುತ್ತಾ ಗಳಿಸಿದ್ದ ೪೪ ಕಾರ್ಮಿಕ ಕಾನೂನುಗಳನ್ನು ಮಾಲಿಕರ ಪರವಾಗಿ ತಿದ್ದುಪಡಿ ರದ್ದು ಮಾಡಲು ಮುಂದಾಗಿ ಹೀಗೆ ತಿದ್ದುಪಡಿ ಮಾಡಲು ಹೊರಟಿರುವ ಕಾನೂನು ತಿದ್ದುಪಡಿಗಳಲ್ಲಿ ದೇಶದ ಕೋಟ್ಯಾಂತರ…

Read More