ರೋಟಾ ವೈರಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಜಿಲ್ಲೆಯ ಅರ್ಹ ಮಕ್ಕಳು ರೋಟಾ ವೈರಸ್ ಲಸಿಕೆಯಿಂದ ವಂಚಿತರಾಗದಿರಲಿ : ಎಚ್.ವಿಶ್ವನಾಥರೆಡ್ಡಿ ಕೊಪ್ಪಳ ಸೆ.  ರೋಟಾ ವೈರಸ್ ಲಸಿಕೆ ಬಗ್ಗೆ ಎಲ್ಲಾ ತಾಯಂದಿರಿಗೆ ಅರಿವು ಮೂಡಿಸಿ, ಜಿಲ್ಲೆಯ ಅರ್ಹ ಮಕ್ಕಳು ಈ ಲಿಸಿಕೆಯಿಂದ ವಂಚಿತರಾಗದಿರಲಿ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಚ್.ವಿಶ್ವನಾಥರೆಡ್ಡಿ ಅವರು ವೈದ್ಯಾಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಮಹಾ ವಿದ್ಯಾಲಯ ಕೊಪ್ಪಳ ಹಾಗೂ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಇಂದು (ಸೆಪ್ಟೆಂಬರ್.5) ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ “ರೋಟಾ ವೈರಸ್ ಲಸಿಕಾ ಕಾರ್ಯಕ್ರಮ”ವನ್ನು ಸಸಿಗೆ ನೀರುಣಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ರೋಟಾ ವೈರಸ್ ದೇಶದ ಹಲವು ರಾಜ್ಯಗಳಲ್ಲಿ ಇತ್ತು.  ಇದನ್ನು ತಡೆಗಟ್ಟಲು ಲಸಿಕಾ ಕಾರ್ಯಕ್ರಮವನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗಿದೆ.  ನಮ್ಮ ರಾಜ್ಯ ಹಾಗೂ ಜಿಲ್ಲೆಯಲ್ಲಿಯೂ ಈ…

Read More