ಸರಳವಾಗಿ ಜನರಿಗೆ ಮರಳು ಒದಗಿಸುವುದು ಸರ್ಕಾರದ ಗುರಿ : ಸಿ.ಸಿ ಪಾಟೀಲ

ಕೊಪ್ಪಳ ಸೆ.   ಪ್ರತಿಯೊಂದು ಜನರಿಗೆ ಮರಳು ಸುಲಲಿತವಾಗಿ ತಲುಪುವಂತೆ ಮಾಡುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಸಿ.ಸಿ ಪಾಟೀಲ ಅವರು ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಡವರು, ಸಾರ್ವಜನಿಕರು ಮನೆ  ಹಾಗೂ ಕಟ್ಟಡ ಕಟ್ಟಿಸಿಕೊಳ್ಳಲು ಸುಲಭವಾಗಿ ಮರಳು ಲಭ್ಯವಾಗುವಂತೆ ಮಾಡಲು ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು.  ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಇದರ ಜೊತೆ ಜೊತೆಗೆ ಸಾರ್ವಜನಿಕರಿಗೆ ಮರಳು ಸುಲಭವಾಗಿ ಲಭ್ಯವಾಗುವಂತೆ ಮಾಡಬೇಕಿದೆ.  ಸರ್ಕಾರದ ಯಾವುದೇ ಕಾರ್ಯಕ್ರಮಗಳು ಮಂದಗತಿಯಲ್ಲಿ ಸಾಗಬಾರದು.  ಅಕ್ರಮ ಗಣಿ ಮತ್ತು ಮರಳು ಸಾಗಾಣಿಕೆ ನಿಯಂತ್ರಣಕ್ಕೆ ಮೈನಿಂಗ್, ಕಂದಾಯ, ಅರಣ್ಯ ಹಾಗೂ ಪೊಲೀಸ್ ಇಲಾಖೆಯವರು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು.  ಮರಳು ಗಣಿಗಾರಿಕೆಯನ್ನು ಸುಗಮಗೊಳಿಸಲು…

Read More