49 ಗಣ್ಯರ ವಿರುದ್ಧ ದೇಶದ್ರೋಹದ ಮೊಕದ್ದವೆು : ಕೇಂದ್ರ ಸರಕಾರದ ಕ್ರಮ ಖಂಡಿಸಿ ಪ್ರತಿಭಟನೆ

ಗಣ್ಯರ ವಿರುದ್ಧ ದೇಶದ್ರೋಹ ಪ್ರಕರಣ: ಕೇಂದ್ರದ ಕ್ರಮ ಖಂಡಿಸಿ ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಬೆಂಗಳೂರು, ಅ. 7: ‘ಗುಂಪು ಹತ್ಯೆ’ ಕುರಿತು ಪ್ರಧಾನಿ ಮೋದಿಗೆ ಬಹಿರಂಗ ಪತ್ರ ಬರೆದ 49 ಗಣ್ಯರ ವಿರುದ್ಧ ದೇಶದ್ರೋಹದ ಮೊಕದ್ದವೆು ದಾಖಲಿಸಿದ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ಫ್ಯಾಸಿಸ್ಟ್ ವಿರೋಧಿ ಒಕ್ಕೂಟದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಸೋಮವಾರ ಇಲ್ಲಿನ ಪುರಭವನದಲ್ಲಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ನೂರಾರು ಕಾರ್ಯಕರ್ತರು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಪ್ರಜಾಪ್ರಭುತ್ವ ವಿರೋಧಿ, ಫ್ಯಾಸಿಸ್ಟ್ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಪ್ರಜಾಪ್ರಭುತ್ವದ ಹತ್ಯೆ: ಪ್ರತಿಭಟನೆ ನೇತೃತ್ವ ವಹಿಸಿದ್ದ ವಕೀಲ ಎಸ್.ಬಾಲನ್, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿನ ಎಲ್ಲ ಸಂವಿಧಾನಿಕ ಸಂಸ್ಥೆಗಳನ್ನು ಹತ್ಯೆ ಮಾಡಲಾಗಿದೆ. ಇದೀಗ ಅರ್ಥಿಕ ಮತ್ತು ಪ್ರಜಾಪ್ರಭುತ್ವವನ್ನು ಹತ್ಯೆ ಮಾಡಿರುವುದು ದೇಶ ನಾಶದ…

Read More