ಸಾವರ್ಕರ್ ಬಗ್ಗೆ ಸತ್ಯ ಹೇಳಿದ್ದಕ್ಕೆ ಬಿಜೆಪಿಯವರಿಗೆ ತಡೆಯಲಾಗುತ್ತಿಲ್ಲ: ಸಿದ್ದರಾಮಯ್ಯ

ಮೈಸೂರು, : ಗಾಂಧಿ ಕೊಲೆ ಪ್ರಕರಣದಲ್ಲಿ ಸಾವರ್ಕರ್ ಆರೋಪಿಯಾಗಿದ್ದರು ಎಂಬ ಸತ್ಯವನ್ನು ಹೇಳಿದ್ದಕ್ಕೆ ಬಿಜೆಪಿಯವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ ಎಂದು ಮಾಜಿ ಸಿಎಂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದರು. ರವಿವಾರ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸತ್ಯ ಹೇಳಿದ್ದಕ್ಕೆ ಎಲ್ಲರೂ ನನ್ನ ಮೇಲೆ ಮುಗಿಬಿದ್ದಿದ್ದಾರೆ. ಗಾಂಧಿ ಕೊಲೆ ಆರೋಪಿಗೆ ಭಾರತ ರತ್ನ ಬೇಡ ಎಂದು ಹೇಳಿದ್ದೆ. ಅದಕ್ಕೆ ಎಲ್ಲರೂ ನನ್ನ ಮೇಲೆ ತಿರುಗಿ ಬಿದ್ದಿದ್ದಾರೆ. ನಾನೇನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು. ಸಿದ್ದಗಂಗಾ ಶ್ರೀಗೆ ಭಾರತ ರತ್ನ ಕೊಡಬೇಕೆಂದು ನಾವೆಲ್ಲರೂ ಒತ್ತಾಯ ಮಾಡಿದ್ದೆವು. ಆದರೆ ಸಾವರ್ಕರ್ ಅವರಿಗೆ ಕೊಡಲು ಮುಂದಾಗಿದ್ದಾರೆ. ಅವರೊಬ್ಬ ಹಿಂದೂ ಹೆಸರಿನಲ್ಲಿ ಕೋಮುವಾದ ಸೃಷ್ಟಿ ಮಾಡಿದ ವ್ಯಕ್ತಿ. ಹಾಗೆಯೇ, ಗಾಂಧಿ ಕೊಲೆಯ ಪ್ರಮುಖ ಆರೋಪಿ. ನಂತರ ಸುಪ್ರೀಂ ಕೋರ್ಟ್‍ನಲ್ಲಿ ಆರೋಪ ಮುಕ್ತಗೊಂಡಿದ್ದಾರೆ. ಆದರೂ ಅವರಿಗೆ ಕೊಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.…

Read More