ಕರವೇ ಕಾರ್ಯಕರ್ತರ ಬಂಧನಕ್ಕೆ ಆಗ್ರಹ ನಾಳೆ ರಾಜ್ಯಾದ್ಯಂತ ಓಪಿಡಿ ಬಂದ್ ! 

 ಬೆಂಗಳೂರು , ನ . 7 : ಕರವೇ ಕಾರ್ಯಕರ್ತರ ಬಂಧನಕ್ಕೆ ಆಗ್ರಹಿಸಿ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಕಿರಿಯ ವೈದ್ಯರ ಧರಣಿ  ಮುಂದುವರಿದಿದೆ . ನಾಳೆ ( ನ . 8 ) ಯಿಂದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಮುಂದಾಗಿದ್ದು , ರಾಜ್ಯಾದ್ಯಂತ ಒಪಿಡಿ ಬಂದ್ ಮಾಡಿ ಹೋರಾಟಕ್ಕೆ ಕರೆ ನೀಡಿದ್ದಾರೆ . ವೈದ್ಯತೀಯ ವಿದ್ಯಾರ್ಥಿಗಳು ಹಾಗೂ ಕಿರಿಯ ವೈದ್ಯರ ಮೇಲೆ ಹಲ್ಲೆ ನಡೆಸಿದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಧರಣಿನಿರತರು ಆಗ್ರಹಿಸಿದ್ದಾರೆ . ನಾಳೆ ಬೆಳಗ್ಗೆ 6 ರಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೂ ರಾಜ್ಯಾದ್ಯಂತ ಎಲ್ಲ ಖಾಸಗಿ ಆಸ್ಪತ್ರೆಯ ಒಪಿಡಿ ಬಂದ್ ಮಾಡಿ ಧರಣಿ ನಡೆಸುವಂತೆ ಮನವಿ ಮಾಡಲಾಗಿದೆ . ವೈದ್ಯರ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಿ , ಕ್ರಮ ಕೈಗೊಳ್ಳದಿದ್ದಲ್ಲಿ ದೇಶದಾದ್ಯಂತ ಹೊರ ರೋಗಿ ಚಿಕಿತ್ಸೆಯನ್ನು…

Read More