ಬಿಜೆಪಿ ನಾಯಕ ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ?

ಬೆಂಗಳೂರು, ನ.10: ಕಾಗವಾಡ ವಿಧಾನಸಭಾ ಕ್ಷೇತ್ರದ ಅನರ್ಹ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್‌ಗೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆಗಳಿರುವುದರಿಂದ, ಕಳೆದ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಪರಾಭವಗೊಂಡಿದ್ದ ಬಿಜೆಪಿಯ ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ ರಾಜು ಕಾಗೆ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆಯಾದಲ್ಲಿ ತನಗೆ ಉಪ ಚುನಾವಣೆಯಲ್ಲಿ ಟಿಕೆಟ್ ಕೊಡಿಸಬೇಕು ಎಂದು ಚರ್ಚೆ ನಡೆಸಿದ್ದರು ಎಂದು ತಿಳಿದು ಬಂದಿದೆ. ಈ ಬಗ್ಗೆ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ವೀಕ್ಷಕರು ಹಾಗೂ ಹಿರಿಯ ಮುಖಂಡರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷದ ತತ್ವ-ಸಿದ್ಧಾಂತಗಳನ್ನು ಒಪ್ಪಿಕೊಂಡು ಯಾರು ಬೇಕಾದರೂ ಪಕ್ಷಕ್ಕೆ ಬರಬಹುದು. ಆದರೆ, ಟಿಕೆಟ್ ನೀಡುವ ಸಂಬಂಧ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದಿದ್ದಾರೆ. ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ…

Read More