ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಚಿವ ಜಗದೀಶ್ ಶೆಟ್ಟರ್

ಬೆಂಗಳೂರು, ಜ. 4: ಪರಿಹಾರ ಧನ ನೀಡಲು ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ. ಶನಿವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಹರಳೂರು ಮುದ್ದೇನಹಳ್ಳಿಯಲ್ಲಿನ ರಕ್ಷಣಾ, ಏರೋಸ್ಪೇಸ್ ಹೈಟೆಕ್ ಇಂಡಸ್ಟ್ರಿ ಲೇಔಟ್ ಕೈಗಾರಿಕಾ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆಂದು ರೈತರಿಂದ ಭೂ ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಪರಿಹಾರ ನೀಡುವುದು ಸರಕಾರದ ಕರ್ತವ್ಯ. ಈ ಹಿನ್ನೆಲೆಯಲ್ಲಿ ಪರಿಹಾರ ಬಿಡುಗಡೆಗೆ ಅಧಿಕಾರಿಗಳು ಲಂಚಕ್ಕೆ ಕೈಚಾಚಿದರೆ ಅಂತಹ ಅಧಿಕಾರಿಗಳ ವಿರುದ್ಧ ದೂರು ನೀಡಿ. ತಕ್ಷಣವೇ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ತಾಲೂಕಿನ ಹರಳೂರು, ಪೋಲನಹಳ್ಳಿ, ಮುದ್ದೇನಹಳ್ಳಿ ಸೇರಿದಂತೆ ಹಲವು ಕಡೆ ದಿಢೀರ್ ಭೇಟಿ ನೀಡಿದ ಅವರು, ಅಲ್ಲಿನ ರೈತರೊಂದಿಗೆ ಮಾತುಕತೆ…

Read More