ಕನಕಗಿರಿ ಉತ್ಸವ ಆಚರಣೆಗೆ ಕ್ರಮ : ಡಿಸಿಎಂ ಲಕ್ಷö್ಮಣ ಸವದಿ

ಕೊಪ್ಪಳ ಜ. : ಕನಕಗಿರಿ ಉತ್ಸವವನ್ನು ರಾಜ್ಯ ಸರ್ಕಾರದ ವತಿಯಿಂದ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು, ಸಾರಿಗೆ ಮತ್ತು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷö್ಮಣ ಸಂಗಪ್ಪ ಸವದಿ ಹೇಳಿದರು. ಕನಕಗಿರಿ ಉತ್ಸವವ ಆಚರಣೆ ನಿಮಿತ್ತ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರದಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಐತಿಹಾಸಿಕ ಸುಪ್ರಸಿದ್ಧ ಪುರಾತನ ಸ್ಮಾರಕಗಳನ್ನು ರಕ್ಷೀಸುವ ಹಾಗೂ ಅಭಿವೃದ್ಧಿ ಪಡಿಸುವ ಮತ್ತು ನಮ್ಮ ಸಂಸ್ಕೃತಿ, ಪರಂಪರೆಯನ್ನು ಯುವ ಪಿಳಿಗೆಗೆ ತಿಳಿಸುವುದೇ ನಮ್ಮ ಸರ್ಕಾರದ ಉದ್ದೇಶವಾಗಿದೆ.  ಈ ದಿಶೇಯಲ್ಲಿ ಕೊಪ್ಪಳ ಜಿಲ್ಲೆಯ ಆನೆಗೊಂದಿ ಹಾಗೂ ಬಳ್ಳಾರಿ ಜಿಲ್ಲೆಯ ಹಂಪಿ ಉತ್ಸವಗಳನ್ನು ಅದ್ದೂರಿಯಾಗಿ ಆಚರಿಸಲಾಗಿದೆ.  ಆನೆಗೊಂದಿ ಉತ್ಸವ-2020ರ ಮಾದರಿಯಲ್ಲಿ ಜಿಲ್ಲೆಯ ಸುಪ್ರಸಿದ್ಧ ಕನಕಗಿರಿಯ ಉತ್ಸವವನ್ನು ಸಹ ಆಚರಿಸಲಾಗುವುದು.  ಈ ನಿಟ್ಟಿನಲ್ಲಿ ಜಿಲ್ಲಾಡಳಿತವು ಉತ್ಸವ ಆಚರಣೆಗೆ ಬೇಕಾಗುವ ಅನುದಾನದ ಅಂದಾಜು…

Read More