ವಸತಿ ರಹಿತರಿಗೆ ನಿವೇಶನ ಮಂಜೂರು ನಿಯಮಾನುಸಾರ ಆಯ್ಕೆ ಪ್ರಕ್ರಿಯೆ ನಡೆಯಲಿ : ಪಿ.ಸುನೀಲ್ ಕುಮಾರ್

ಕೊಪ್ಪಳ ಜ.  : ಕೊಪ್ಪಳ ಜಿಲ್ಲೆಯ ವಸತಿ ರಹಿತರಿಗೆ ವಾಜಪೇಯಿ ನಗರ ವಸತಿ ಯೋಜನೆ, ಪ್ರಧಾನಮಂತ್ರಿ ಆವಾಸ್ ಹಾಗೂ ವಿವಿಧ ಯೋಜನೆಗಳಡಿ ನಿವೇಶ ಮಂಜೂರಿಸುವ ಕುರಿತಂತೆ ನಿಯಮಾನುಸಾರವಾಗಿ ಆಯ್ಕೆ ಪ್ರಕ್ರಿಯೆ ನಡೆಯಬೇಕು ಎಂದು ಜಿಲ್ಲಾಧಿಕಾ ಪಿ.ಸುನೀಲ್ ಕುಮಾರ್ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಾಜಪೇಯಿ ನಗರ ನಿವೇಶನ ಯೋಜನೆ ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೊಮವಾರದಂದು (ಜ. 13) ಏರ್ಪಡಿಸಲಾಗಿದ್ದ, ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ವಸತಿ ರಹಿತರಿಗೆ ನಿವೇಶನ ಸೌಲಭ್ಯ ಒದಗಿಸಲು ಸಂಬAಧಿಸಿದ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಫಲಾನುಭವಿಗಳ ಅನುಗಣವಾಗಿ ಅವಶ್ಯವಿರುವ ಕಡೆ ಜಮೀನನ್ನು ಖರೀದಿಸಬೇಕು. ಭೂ ಮಾಲೀಕರಿಂದ ಜಮೀನು ಖರೀದಿ ಪ್ರಕ್ರಿಯೆ ನಿಯಮಾನುಸಾರ ಅಂದರೆ ಜಮೀನಿನ ಪ್ರಸ್ತುತ ಮಾರುಕಟ್ಟೆಯ ಸರ್ಕಾರಿ ದರಕ್ಕೆ…

Read More