ಮಾಸ್ಕ್ ಧರಿಸಿ ಕಲಾಪದಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ ಸೇರಿ ಹಲವು ಸದಸ್ಯರು

ಬೆಂಗಳೂರು, ಮಾ. 23: ಮಾರಣಾಂತಿಕ ಕೊರೋನ ವೈರಸ್ ಸೋಂಕಿನ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ಈ ವೇಳೆ ಅಧಿವೇಶನ ಮುಂದೂಡಲು ಒತ್ತಾಯಿಸಿದರೆ, ಮತ್ತೊಂದೆಡೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಹಲವು ಸದಸ್ಯರು ಮುಖಕ್ಕೆ ಮಾಸ್ಕ್ ಧರಿಸಿಯೇ ಕಲಾಪದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಸೋಮವಾರ ನಿಗದಿಯಂತೆ ಬೆಳಗ್ಗೆ 11:10ಕ್ಕೆ ಕಲಾಪ ಸಮಾವೇಶನಗೊಂಡಿತು. ಈ ವೇಳೆ ಸ್ಪೀಕರ್, ಕೊರೋನ ವೈರಸ್ ತಡೆಗಟ್ಟುವ ದೃಷ್ಟಿಯಿಂದ ಪ್ರಧಾನಿ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂವನ್ನು ರಾಜ್ಯದ ಜನತೆ ಯಶಸ್ವಿಗೊಳಿಸಿದ್ದು, ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಕೊರೋನ ವೈರಸ್ ಸೋಂಕಿನ ಬಗ್ಗೆ ಜನರಲ್ಲಿನ ಆತಂಕ ದೂರ ಮಾಡಬೇಕಿದೆ. ಆ ನಿಟ್ಟಿನಲ್ಲಿ ರಾಜ್ಯ ಸರಕಾರ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮಗಳನ್ನು ಎಲ್ಲರೂ ಪಾಲಿಸಬೇಕು. ಇದು ರಾಜ್ಯದ ಪ್ರತಿಯೊಬ್ಬ ವ್ಯಕ್ತಿಯ ಜವಾಬ್ದಾರಿಯೂ ಹೌದು ಎಂದು ಸ್ಪೀಕರ್ ಸೂಚಿಸಿ, ಬಳಿಕ ಪ್ರಶ್ನೋತ್ತರವನ್ನು ಕೈಗೆತ್ತಿಕೊಂಡರು. ಈ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್‌ನ ಆರ್.ವಿ.ದೇಶಪಾಂಡೆ ಮತ್ತು ಎಚ್.ಕೆ. ಪಾಟೀಲ್,…

Read More