ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಿಂದ ರೂ. 1 ಕೋಟಿ ನೀಡಿದ ಸಂಸದ ಸಂಗಣ್ಣ ಕರಡಿ

ಕೊಪ್ಪಳ : ಕೊವೀಡ್ -19, ನೊವೇಲ್ ಕೊರೋನಾ ವೈರಸ್ ತಡೆಗಟ್ಟುವ ನಿಯಂತ್ರಣಕ್ಕಾಗಿ ಪ್ರಧಾನಿ ಮಂತ್ರಿಗಳ ಪರಿಹಾರ ನಿಧಿಗೆ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಿಂದ (ಎಂಪಿಎಲ್‌ಎಡಿಎಸ್) ಸಂಸದ ಸಂಗಣ್ಣ ಕರಡಿ ಅವರು 1 ಕೋಟಿ ರೂ. ನೆರವು ನೀಡಿದ್ದಾರೆ. ಅವರು ಸೋಮವಾರದಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ಅವರನ್ನು ಭೇಟಿ ಮಾಡಿ, ಎಂಪಿಎಲ್‌ಎಡಿಎಸ್ ಯೋಜನೆಯ ಅನುದಾನದಡಿ ಪ್ರಧಾನಿ ಮಂತ್ರಿಗಳ ಪರಿಹಾರ ನಿಧಿಗೆ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಿಂದ ರೂ. 1 ಕೋಟಿ ನೀಡಲು ಒಪ್ಪಿಗೆ ಪತ್ರವನ್ನು ನೀಡಿದರು. ಜಿಲ್ಲೆಯಲ್ಲಿ ಕೊರಾನಾ ತಡೆಗಟ್ಟಲು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಸದ್ಯದ ಪರಿಸ್ಥಿತಿ ಹಾಗೂ ಮುಂದಿನ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳೊಮದಿಗೆ ಚರ್ಚಿಸಿದರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಸಾಧ್ಯವಿರುವ ಎಲ್ಲಾ ನೆರವು ಒದಗಿಸಿ ಕೊಡುವಲ್ಲಿ ಪ್ರಮಾಣಿ ಪ್ರಯತ್ನವನ್ನು ಮಾಡುವದಾಗಿ ಹೇಳಿದರು. ಕರೋನಾ ವೈರಸ್ ತಡೆಗಟ್ಟಲು ಜಿಲ್ಲಾಡಳಿತ ಕೈಗೊಂಡಿರುವ ಹಲವು…

Read More