ಕರ್ನಾಟಕದಲ್ಲಿ ಒಂದೇ ದಿನ 130 ಮಂದಿಗೆ ಕೊರೋನ ಸೋಂಕು ದೃಢ: ಒಟ್ಟು ಸಂಖ್ಯೆ 2,089ಕ್ಕೆ ಏರಿಕೆ

ಚಿಕ್ಕಬಳ್ಳಾಪುರ 27, ಯಾದಗಿರಿ 24, ಉಡುಪಿಯಲ್ಲಿ 23 ಪ್ರಕರಣಗಳು ಪಾಸಿಟಿವ್ ಬೆಂಗಳೂರು, ಮೇ 24: ಕರ್ನಾಟಕದಲ್ಲಿ ಒಂದೇ ದಿನ ಮತ್ತೆ 130 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 2089ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ಶನಿವಾರ ಸಂಜೆ 5 ಗಂಟೆಯಿಂದ ರವಿವಾರ ಸಂಜೆ 5 ಗಂಟೆವರೆಗೆ 130 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ. ಈ ಪೈಕಿ ಚಿಕ್ಕಬಳ್ಳಾಪುರದಲ್ಲಿ 27, ಯಾದಗಿರಿ 24, ಉಡುಪಿ 23, ಮಂಡ್ಯ 15, ಹಾಸನ 14, ಬೀದರ್ 6, ಕಲಬುರಗಿ 6, , ದಾವಣಗೆರೆ 4, ಉತ್ತರ ಕನ್ನಡ, ಶಿವಮೊಗ್ಗ, ತುಮಕೂರಿನಲ್ಲಿ ತಲಾ 2, ದಕ್ಷಿಣ ಕನ್ನಡ, ಕೊಡಗು, ಧಾರವಾಡ, ವಿಜಯಪುರ ಹಾಗೂ ಬೆಂಗಳೂರು ನಗರದಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲಾಗಿವೆ ಎಂದು ವರದಿಯಲ್ಲಿ ತಿಳಿಸಿದೆ. ಒಟ್ಟಾರೆ ರಾಜ್ಯದಲ್ಲಿ 2,089…

Read More