ರಾಜ್ಯದಲ್ಲಿ ಕೊರೋನ ಕೋಲಾಹಲ: ಒಂದೇ ದಿನ 248 ಮಂದಿಗೆ ಸೋಂಕು ದೃಢ, ಮಹಿಳೆ ಸಾವು

ಬೆಂಗಳೂರು, ಮೇ 29: ಕರ್ನಾಟಕದಲ್ಲಿ ಒಂದೇ ದಿನ ಮತ್ತೆ 248 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 2781ಕ್ಕೆ ಏರಿಕೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊರೋನದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 48 ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ಗುರುವಾರ ಸಂಜೆ 5 ಗಂಟೆಯಿಂದ ಶುಕ್ರವಾರ ಸಂಜೆ 5 ಗಂಟೆವರೆಗೆ 248 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ. ಮೇ.24ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ 50 ವರ್ಷದ ಮಹಿಳೆಯೊಬ್ಬರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 48ಕ್ಕೆ ಏರಿಕೆಯಾಗಿದೆ. ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ರಾಯಚೂರು 62, ಕಲಬುರಗಿ 61, ಯಾದಗಿರಿ 60, ಉಡುಪಿ 15, ಬೆಂಗಳೂರು ನಗರ 12, ಬಳ್ಳಾರಿ…

Read More