ಒಂದೇ ದಿನ 299 ಮಂದಿಗೆ ಕೊರೋನ ಪಾಸಿಟಿವ್: ಸಾವಿನ ಸಂಖ್ಯೆ 51ಕ್ಕೆ ಏರಿಕೆ

ಇದುವರೆಗೆ 1,218 ಮಂದಿ ಸಂಪೂರ್ಣ ಗುಣಮು   ಬೆಂಗಳೂರು  : ಕರ್ನಾಟಕದಲ್ಲಿ ಒಂದೇ ದಿನ ಮತ್ತೆ 299 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 3,221ಕ್ಕೆ ಏರಿಕೆಯಾಗಿದೆ. ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಕೊರೋನದಿಂದ ತಲಾ ಒಂದು ಸಾವು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 51ಕ್ಕೆ ಏರಿದೆ . ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ಶನಿವಾರ ಸಂಜೆ 5 ಗಂಟೆಯಿಂದ ರವಿವಾರ ಸಂಜೆ 5 ಗಂಟೆವರೆಗೆ 299 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ. ಮುಂಬೈಯಿಂದ ಹಿಂದಿರುಗಿ ಕ್ವಾರಂಟೈನ್ ನಲ್ಲಿದ್ದ ರಾಯಚೂರು ಜಿಲ್ಲೆಯ 50 ವರ್ಷದ ಪುರುಷರೊಬ್ಬರು ಮೇ.29ರಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಇವರ ಕೊರೋನ ವರದಿ ಪಾಸಿಟಿವ್ ಬಂದಿದೆ. ಬೀದರ್ ಜಿಲ್ಲೆಯ 75 ವರ್ಷದ ಪುರುಷರೊಬ್ಬರು ಜ್ವರ ಮತ್ತು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ…

Read More