ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ

ಕೊಪ್ಪಳ,  : ಪ್ರತಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿದ್ದು, ಅನಾರೋಗ್ಯದ ಲಕ್ಷಣಗಳು ಕಂಡು ಬಂದಲ್ಲಿ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕೋವಿಡ್-19 ರ ಸ್ಟಾö್ಯಂಡರ್ಡ್ ಆಪರೇಟಿಂಗ್ ಪ್ರೊಸಿಜರ್‌ಗಳನ್ನು ನಿರ್ವಹಿಸುವ ಕುರಿತು ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಪ್ರತಿ ವಿದ್ಯಾರ್ಥಿಗೆ ಥರ್ಮಲ್ ಸ್ಕಿçÃನಿಂಗ್ ಮಾಡಬೇಕು. ಇದಕ್ಕಾಗಿ ಆರೋಗ್ಯ ಇಲಾಖೆ ಥರ್ಮಿಲ್ಉ ಸ್ಕ್ರೀನಿಂಗ್ ಪಕರಣಗಳೊಂದಿಗೆ ಸಿಬ್ಬಂದಿಯನ್ನು ನಿಯೋಜಿಸಬೇಕು. ಪರೀಕ್ಷಾ ಕೇಂದ್ರದ ಕೊಠಡಿಗಳಲ್ಲಿ ಪ್ರತಿ ದಿನ ಸೋಂಕು ನಿವಾರಕಗಳನ್ನು ಸಿಂಪಡಿಸಬೇಕು. ಈಗಾಗಲೇ ಗುರುತಿಸಲಾದ ಕ್ವಾರಂಟೈನ್ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಉಳಿದುಕೊಳ್ಳಲು ಬಳಸುವಂತಿಲ್ಲ. ಪರೀಕ್ಷಾ ಕೇಂದ್ರಕ್ಕೆ ಹತ್ತಿರವಿರುವ ವಿದ್ಯಾರ್ಥಿ ವಸತಿ ನಿಲಯದಲ್ಲಿ ಮಕ್ಕಳಿಗೆ ಉಳಿದುಕೊಂಡು…

Read More