ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ನಮ್ಮ ಪಕ್ಷ ಸದನದ ಒಳಗೆ ಮತ್ತು ಹೊರಗೆ ಬಲವಾಗಿ ವಿರೋಧಿಸಲಿದೆ-ಸಿದ್ದರಾಮಯ್ಯ ಟ್ವೀಟ್

ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ, ಸಿ, 80 ಹಾಗೂ 63 ಸೆಕ್ಷನ್‌ಗಳನ್ನು ರದ್ದುಗೊಳಿಸಲು ಹೊರಟಿರುವ ಮುಖ್ಯಮಂತ್ರಿಗಳು ಉಳುವವರಿಂದ ಭೂಮಿ ಕಿತ್ತುಕೊಂಡು ಉಳ್ಳವರನ್ನು ಭೂಮಿಯ ಒಡೆಯರನ್ನಾಗಿ ಮಾಡಲು ಹೊರಟಿದೆ.-ಸಿದ್ದರಾಮಯ್ಯ ಟ್ವೀಟ್ ಕೃಷಿ ಭೂಮಿ ಹೊಂದಲು ಆದಾಯದ ಮಿತಿ ಹೇರಿದ್ದ ಸೆಕ್ಷನ್ 79ಎ, ಕೃಷಿಕರಲ್ಲದವರಿಗೆ ಭೂಮಿ ಖರೀದಿಸುವುದನ್ನು ನಿಷೇಧಿಸಿದ್ದ ಸೆಕ್ಷನ್ 79ಬಿ, ಸುಳ್ಳು ಪ್ರಮಾಣಪತ್ರ ಸಲ್ಲಿಸಿದವರಿಗೆ ದಂಡ ವಿಧಿಸಿದ್ದ ಸೆಕ್ಷನ್ 79 ಸಿ, ಕೃಷಿಕರಲ್ಲದವರಿಗೆ ಭೂಮಿ ವರ್ಗಾವಣೆ ನಿಷೇಧಿಸಿದ್ದ ಸೆಕ್ಷನ್ 80, ಭೂ ಖರೀದಿಗೆ ಗರಿಷ್ಠ ಮಿತಿ ವಿಧಿಸಿದ್ದ ಸೆಕ್ಷನ್ 63 ಅನ್ನು ರದ್ದುಪಡಿಸುವುದು ಭೂಮಿತಾಯಿಗೆ ಬಗೆವ ದ್ರೋಹ. ಭೂ ಸುಧಾರಣೆ ಕಾಯ್ದೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ. ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ, ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರು ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿ ಇನ್ನಷ್ಟು ಬಲಪಡಿಸಿ ಉಳುವವನನ್ನೇ ಭೂಮಿಯ ಒಡೆಯನನ್ನಾಗಿ ಮಾಡಿದ್ದರು. ಯಡಿಯೂರಪ್ಪ…

Read More