ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಂದೆಗೆ ಕೊರೋನಾ ಪಾಜಿಟಿವ್

ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ 82 ವರ್ಷದ ನನ್ನ ಪೂಜ್ಯ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಅವರು ಶೀಘ್ರ ಗುಣಮುಖರಾಗುವಂತೆ ನೀವೂ ಪ್ರಾರ್ಥಿಸಿ ಎಂದು ಕೋರಿಕೊಳ್ಳುತ್ತಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿರುವ ಅವರುಸರ್ಕಾರದ ಹಿಂದಿನ ಮಾರ್ಗಸೂಚಿ ಅನ್ವಯವೇ ಕ್ವಾರಂಟೈನ್ ನಿಯಮಗಳನ್ನು ಪಾಲಿಸಲಾಗುತ್ತಿದ್ದು, ಈಗಲೂ ಅದೇ ಮುಂದುವರಿದಿದೆ. ಯಾವುದೇ ಹೊಸ ಮಾರ್ಗಸೂಚಿ ಮಾಡಲಾಗಿಲ್ಲ. ಅಂತರ್ ರಾಜ್ಯ ಪ್ರಯಾಣಿಕರು ಯಾವ ರಾಜ್ಯದಿಂದ ಆಗಮಿಸುತ್ತಿದ್ದಾರೆ ಎನ್ನುವುದರ ಮೇಲೆ ಅವರ ಕ್ವಾರಂಟೈನ್ ಅವಧಿ ಅವಲಂಬಿತವಾಗಿದೆ. ನನ್ನ ಟ್ವೀಟ್ ಗೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ. ನಮ್ಮ ಮನೆಯಲ್ಲಿ…

Read More