ದೀನ ದಲಿತರಿಗೆ ಡಾ. ಬಿ.ಆರ್. ಅಂಬೇಡ್ಕರ್ ಅವರು ಸ್ಪೂರ್ತಿಯ ಸೆಲೆಯಾಗಿದ್ದರು- ಆರ್. ರಾಮಚಂದ್ರನ್

ಕೊಪ್ಪಳ ೦9 (ಕ.ವಾ): ಶೋಷಿತ ಸಮುದಾಯಗಳ, ದೀನ ದಲಿತರಿಗೆ ಡಾ. ಬಿ.ಆರ್. ಅಂಬೇಡ್ಕರ್ ಅವರು ಸ್ಪೂರ್ತಿಯ ಸೆಲೆಯಾಗಿದ್ದರು ಅವರ ಆಶಯಗಳನ್ನು ಈಡೇರಿಸಲು ನಾವೆಲ್ಲ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ಹೇಳಿದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿಯ ಸಹಯೋಗದಲ್ಲಿ ಕೊಪ್ಪಳ ನಗರದ ಬಾಲಕರ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೨೫ ನೇ ಜನ್ಮ ವರ್ಷಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನತೆಯ ಚಿಂತನೆಗಳು’ ವಿಚಾರಸಂಕಿರಣದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಭಾರತೀಯ ಸಮಾಜದ ಅವಕಾಶ ವಂಚಿತ ಸಮುದಾಯದ ಹಿನ್ನೆಲೆಯಿಂದ ಹುಟ್ಟಿಬಂದ ಅಂಬೇಡ್ಕರ್ ಅವರು, ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಮಾಡಿದ ಸಾಧನೆ ಅನನ್ಯ. ಸಮಾನತೆ ಮತ್ತು ಮಾನವೀಯತೆಯನ್ನು ಗೌರವಿಸುವ ಅವರ ಚಿಂತನೆ ಎಲ್ಲರಿಗೂ ಆದರ್ಶವಾದುದು. ಪ್ರತಿಯೊಬ್ಬರಿಗೂ ವಿದ್ಯಾರ್ಥಿ ಜೀವನ ಅತ್ಯಂತ ಪ್ರಮುಖವಾದ ಘಟ್ಟ. ವಿದ್ಯಾರ್ಥಿ ಜೀವನದಲ್ಲಿ ತಾವು ಅನುಭವಿಸಿದ ನೋವು, ಅವಮಾನವನ್ನು ಯಾರೂ ಸಹಿಸಿಕೊಂಡು ಬಾಳುವ ಪರಿಸ್ಥಿತಿ ಬಾರದಿರಲಿ ಎನ್ನುವ ದೃಷ್ಟಿಯಿಂದ ಸಾಮಾಜಿಕ ನ್ಯಾಯವನ್ನು ಪ್ರಮುಖ ಉದ್ದೇಶವಾಗಿಸಿಕೊಂಡು, ಅಂಬೇಡ್ಕರ್ ಅವರು ಸಂವಿಧಾನ ರಚಿಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದರು. ಆರೋಗ್ಯ ಮತ್ತು ಸ್ವಚ್ಛತೆಗೆ ಒಂದಕ್ಕೊಂದು ಪೂರಕ ಸಂಬಂಧವಿದೆ. ಸ್ವಚ್ಛತೆ ಇರುವಲ್ಲಿ ಮಾತ್ರ ಆರೋಗ್ಯ ಇರಲು ಸಾಧ್ಯ. ಗಂಗಾವತಿ ತಾಲೂಕಿನ ಡಣಾಪುರ ಗ್ರಾಮದ ೧೦ ನೇ ತರಗತಿ ವಿದ್ಯಾರ್ಥಿನಿ ಮಲ್ಲಮ್ಮ ಶೌಚಾಲಯಕ್ಕಾಗಿ ಹಾಗೂ ಸ್ವಾಭಿಮಾನಕ್ಕಾಗಿ ಉಪವಾಸ ಸತ್ಯಾಗ್ರಹ ಮಾಡಿ, ಕೊನೆಗೂ ಶೌಚಾಲಯ ಕಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾದಳು. ವಯಕ್ತಿಕ ಶೌಚಾಲಯ ಹೊಂದದಿರುವ ಕುಟುಂಬದ ಎಲ್ಲ ವಿದ್ಯಾರ್ಥಿಗಳೂ ಸಹ ಮಲ್ಲಮ್ಮಳಂತೆ ಶೌಚಾಲಯಕ್ಕಾಗಿ ತಮ್ಮ ಪಾಲಕರನ್ನು ಒತ್ತಾಯಿಸಿ, ಶೌಚಾಲಯವನ್ನು ತಪ್ಪದೆ ಕಟ್ಟಿಸಿಕೊಳ್ಳುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಆರ್. ರಾಮಚಂದ್ರನ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಮಹಾ ಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ್ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿ ಮಾತನಾಡಿದ ನಗರಸಭೆ ಅಧ್ಯಕ್ಷ ಮಹೇಂದ್ರ ಚೋಪ್ರಾ ಅವರು, ಸಮಾಜದಲ್ಲಿ ಸಮಾನತೆ ಇರಬೇಕು ಎನ್ನುವುದೇ ಅಂಬೇಡ್ಕರ್ ಅವರ ಆಶಯವಾಗಿತ್ತು. ಅವರು ಹೊಂದಿದ್ದ ಅಗಾಧ ಜ್ಞಾನ ಹಾಗೂ ಸಾಮಾಜಿಕ ಕಳಕಳಿಯಿಂದಾಗಿಯೇ ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಸಾಮಾಜಿಕ ಕ್ರಾಂತಿಯಾಗಲು ಸಾಧ್ಯವಾಯಿತು ಎಂದರು.ಲೆ ತೀವ್ರ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನತೆಯ ಚಿಂತನೆಗಳು ಕುರಿತು ವಿಶೇಷ ಉಪನ್ಯಾಸ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿವೃತ್ತ ಉಪನಿರ್ದೇಶಕ ಟಿ. ಕೊಟ್ರಪ್ಪ ಅವರು, ಶೋಷಿತ ಸಮಾಜ, ನಿರ್ಲಕ್ಷ್ಯಕ್ಕೆ ಒಳಗಾದ ಸಮುದಾಯಗಳ ನಂದಾದೀಪ, ಧೀಮಂತ ನಾಯಕ, ದೀನ ದಲಿತರ ಮಹಾ ಚೇತನ, ಮಹಾ ಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಎಂದು ಬಣ್ಣಿಸುವುದರೊಂದಿಗೆ ಉಪನ್ಯಾಸ ಪ್ರಾರಂಭಿಸಿದ ಅವರು, ಅಂಬೇಡ್ಕರ್ ಅವರು ಜನಿಸದೇ ಇದ್ದಿದ್ದರೆ, ದಲಿತರು ಸಮಾಜದಲ್ಲಿ ಸ್ಥಾನಮಾನ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಶಾಲೆಯಲ್ಲಿ ತಾವು ಅಪಮಾನಕ್ಕೆ ಈಡಾದ ಘಟನೆ, ಅವರ ಮನಸ್ಸಿನ ಮೇಪರಿ

????????????????????????????????????

????????????????????????????????????

ಣಾಮ ಬೀರಿತಲ್ಲದೆ, ಛಲದ ಹೋರಾಟಕ್ಕೆ ನಾಂದಿಯಾಯಿತು. ಭಾರತೀಯ ಸಮಾಜದ ಅವಕಾಶ ವಂಚಿತ ಸಮುದಾಯದ ಹಿನ್ನೆಲೆಯಿಂದ ಹುಟ್ಟಿಬಂದ ಅಂಬೇಡ್ಕರ್ ಅವರು, ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಮಾಡಿದ ಸಾಧನೆ ಅನನ್ಯ. ಸಮಾನತೆ ಮತ್ತು ಮಾನವೀಯತೆಯನ್ನು ಗೌರವಿಸುವ ಅವರ ಚಿಂತನೆ ಎಲ್ಲರಿಗೂ ಆದರ್ಶವಾದುದು. ಜೀವನದಲ್ಲಿ ತಾವು ಅನುಭವಿಸಿದ ನೋವು, ಅವಮಾನವನ್ನು ಯಾರೂ ಸಹಿಸಿಕೊಂಡು ಬಾಳುವ ಪರಿಸ್ಥಿತಿ ಬಾರದಿರಲಿ ಎನ್ನುವ ದೃಷ್ಟಿಯಿಂದ ಸಾಮಾಜಿಕ ನ್ಯಾಯವನ್ನು ಪ್ರಮುಖ ಉದ್ದೇಶವಾಗಿಸಿಕೊಂಡು, ಸಂವಿಧಾನ ರಚಿಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದರು. ಶಿಕ್ಷಣ, ಸಂಘಟನೆ ಹಾಗೂ ಹೋರಾಟ ಈ ಮೂರು ಅಂಶಗಳು ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರಮುಖ ಸಿದ್ಧಾಂತಾವಾಗಿದ್ದವು ಎಂದರು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತಾಲೂಕಾ ಪಂಚಾಯತಿ ಅಧ್ಯಕ್ಷ ಬಾಲಚಂದ್ರನ್ ಅವರು ಮಾತನಾಡಿ, ಅಂಬೇಡ್ಕರ್ ಅವರು ಈ ದೇಶದ ಪ್ರತಿಯೊಂದು ಸಮುದಾಯಕ್ಕೂ ಸಲ್ಲಬೇಕಾದವರು. ಮಹಿಳೆಯರಿಗೆ ಸಮಾನ ಹಕ್ಕು ನೀಡುವ ನಿಟ್ಟಿನಲ್ಲಿ ಶ್ರಮಿಸಿದರು. ಅಂಬೇಡ್ಕರ್ ಅವರು ನಡೆದು ಬಂದ ದಾರಿ, ಅವರ ಆದರ್ಶಗಳನ್ನು ಅರಿತುಕೊಂಡು ನಾವು ಸಮಾಜದಲ್ಲಿ ಬದಲಾವಣೆ ತರಲು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಅವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಚನ್ನಬಸಪ್ಪ ಕಾರ್ಯಕ್ರಮ ನಿರೂಪಿಸಿದರು, ಪ್ರೌಢಶಾಲೆ ಮುಖ್ಯಗುರು ಬಸವರಾಜ ದೊಡ್ಡಮನಿ ವಂದಿಸಿದರು.ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಅಲ್ಲದೆ ಅಂಬೇಡ್ಕರ್ ಅವರ ಕುರಿತ ಕಿರುಹೊತ್ತಿಗೆಯನ್ನು ಎಲ್ಲ ವಿದ್ಯಾರ್ಥಿಗಳಿಗೂ ವಿತರಿಸಲಾಯಿತು.

Please follow and like us: