ಏಪ್ರಿಲ್. ೦೯ ರಂದು ಕೊಪ್ಪಳದಲ್ಲಿ ಭಗವಾನ ಮಾಹಾವೀರ ಜಯಂತಿ ಆಚರಣೆ

mahaveer_jayanti

ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಭಗವಾನ ಮಹಾವೀರ ಅವರ ಜಯಂತಿಯನ್ನು ಏ. ೦೯ ರಂದು ಬೆಳಿಗ್ಗೆ ೯-೩೦ ಗಂಟೆಗೆ ಕೊಪ್ಪಳ ಗೋಶಾಲೆ ರಸ್ತೆಯಲ್ಲಿರುವ ಮಹಾವೀರ ಜೈನ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಉದ್ಘಾಟನೆ ನೆರೆವೇರಿಸುವರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪ.ಂ ಅಧ್ಯಕ್ಷ ಶೇಖರಪ್ಪ ನಾಗರಳ್ಳಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ್ ಎಸ್. ತಂಗಡಗಿ, ಇಕ್ಬಾಲ್ ಅನ್ಸಾರಿ ಹಾಗೂ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ ಹಾಗೂ ಶರಣಪ್ಪ ಮಟ್ಟೂರ, ಜಿ.ಪಂ ಉಪಾಧ್ಯಕ್ಷೆ ಲಕ್ಷಮ್ಮ ಎಸ್. ನೀರಲೂಟಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ ಅಧ್ಯಕ್ಷ ಬಾಲಚಂದ್ರನ್, ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಯ್ಯದ್ ಜುಲ್ಲು ಖಾದರ ಖಾದ್ರಿ ಪಾಲ್ಗೊಳ್ಳುವರು. ಗವಿಸಿದ್ದೇಶ್ವರ ಮಹಾವಿದ್ಯಾಲಯ ನಿವೃತ್ತ ಪ್ರಾಧ್ಯಾಪಕರಾದ ಎಸ್.ಎಂ. ಕಂಬಾಳಿಮಠ ಅವರು ಭಗವಾನ ಮಹಾವೀರ ಅವರ ಕುರಿತು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ ೭-೩೦ ಗಂಟೆಗೆ ಭಗವಾನ ಮಹಾವೀರ ರವರ ಭಾವಚಿತ್ರದ ಮೆರವಣಿಗೆ ಕೊಪ್ಪಳ ಅಶೋಕ ವೃತ್ತದಿಂದ ಪ್ರಾರಂಭಗೊಂಡು, ಜವಾಹರ ರಸ್ತೆ ಮೂಲಕ ಜೈನ್ ಬಸದಿ ಮಾರ್ಗಾವಾಗಿ ಜರುಗುವುದು

Please follow and like us: