೬೨ನೇ ಸಂಭ್ರಮದ ರಾಜ್ಯೋತ್ಸವ

೬೨ ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮದಿಂದ ರಾಜ್ಯೋತ್ಸವವನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ರಾಯರಡ್ಡಿ ಧ್ವಜಾರೋಹಣ ನೆರವೇರಿಸಿದರು

. ನಗರದ ಅಶೋಕ ವ್ರತ್ತದಿಂದ ಭವ್ಯ ಮೆರವಣಿಗೆ ಮೂಲಕ ಕನ್ನಡಾಂಬೆಯ ತೇರನ್ನು ಜಿಲ್ಲಾ ಕ್ರೀಡಾಂಗಣದ ವರೆಗೆ ತರಲಾಯಿತು. ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ದ್ವಜಾರೋಹಣ ನೆರವೇರಿಸಿದರು. ಬಳಿಕ ಪೋಲಿಸ್, ಸ್ಕೌಟ್ಸ ಎಂಡ್ ಗೈಡ್ಸ, ಹಾಗೂ ವಿವಿಧ ಶಾಲಾ ಕಾಲೇಜಿನ ಮಕ್ಕಳ ಹೀಗೆ ಒಟ್ಟು ೧೨ ಪಥ ಸಂಚಲನ ತಂಡಗಳಿಂದ ಗೌರವ ವಂದನೆ ಸಲ್ಲಿಸಲಾಯಿತು. ಬಳಿಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿ ಕೆಲ ಮಹನಿಯರನ್ನು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಸನ್ಮಾನಿಸಿದರು. ಇನ್ನು ಶಾಲಾ ಕಾಲೇಜಿನ ಮಕ್ಕಳು ಕಡಿಮೆ ಸಂಖ್ಯೆಯಲ್ಲಿ ಇದ್ದಿದ್ದರಿಂದ ಇಡೀ ಕ್ರೀಡಾಂಗಣ ಖಾಲಿ ಖಾಲಿಯಾಗಿ ಕಾಣುತಿತ್ತು.
ಕೊಪ್ಪಳ ಲೋಕಸಭಾ ಸದಸ್ಯ ಕರಡಿ ಸಂಗಣ್ಣ, ಶಾಸಕ ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ಎಂ.ಕನಗವಲ್ಲಿ, ಎಸ್ಪಿ ಡಾ.ಅನೂಪ್ ಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗ ಇದೇ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶಾಲಾ,ಕಾಲೇಜು ವಿದ್ಯಾರ್ಥಿಗಳು, ಗಣ್ಯರು ಭಾಗೀಯಾಗಿದ್ದರು.

Please follow and like us: