ಎನ್‌ಆರ್‌ಸಿಗೆ ಅವಕಾಶ ನೀಡುವುದಿಲ್ಲ : ಮಮತಾ ಬ್ಯಾನರ್ಜಿ

 : ರಾಜ್ಯದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ( ಎನ್‌ಆರ್‌ಸಿ ಗೆ ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜನತೆಗೆ ಭರವಸೆ 

ನೀಡಿದ್ದಾರೆ . ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಯ ಅಂತಿಮ ಪಟ್ಟಿಯಲ್ಲಿ 14 ಲಕ್ಷ ಹಿಂದೂ , ಬೆಂಗಾಳಿಗಳನ್ನು ಕೈಬಿಟ್ಟಿರುವ ಬಗ್ಗೆ ಮಮತಾ ಬ್ಯಾನರ್ಜಿ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ . ರಾಷ್ಟ್ರೀಯ ಪೌರತ್ವ ನೋಂದಣಿ ಅನುಷ್ಠಾನಗೊಳಿಸುವ ಹೆಸರಿನಲ್ಲಿ ರಾಜ್ಯದಲ್ಲಿ ಕೆಲವು ವ್ಯಕ್ತಿಗಳು ಶಾಂತಿ ಭಂಗ ಉಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ . ಪಶ್ಚಿಮಬಂಗಾಳದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಗೆ ನಾವು ಅವಕಾಶ ನೀಡುವುದಿಲ್ಲ ಎಂದು ಅವರು ತಿಳಿಸಿದರು . “ ಯಾರೊಬ್ಬರೂ ನಿಮ್ಮ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಹಾಗೂ ನಿಮ್ಮನ್ನು ನಿರಾಶ್ರಿತರನ್ನಾಗಿ ಮಾಡಲು ಸಾಧ್ಯವಿಲ್ಲ . ಧರ್ಮದ ಆಧಾರದಲ್ಲಿ ಯಾವುದೇ ವಿಭಜನೆ ಸಾಧ್ಯವಿಲ್ಲ ‘ ಎಂದು ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ . 

Please follow and like us: