ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ನಿಷೇದಾಜ್ಞೆ ಜಾರಿ

ಪ್ರಗತಿಪರ ಸಂಘಟನೆಗಳ ಆಕ್ರೋಶ

ಬೆಂಗಳೂರು : ಹಾವೇರಿ, ಗದಗ, ವಿಜಯಪುರ, ಕೊಪ್ಪಳ ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸರಕಾರ ನಿಷೇದಾಜ್ಞೆ ಜಾರಿ ಮಾಡಿದೆ.

ಪೌರತ್ವ ಕಾಯ್ದೆ ವಿರೋಧಿಸಿ  ದೇಶಾದ್ಯಂತ ಪ್ರತಿಭಟನೆ ಹಿನ್ನೆಲೆ. ನಾಳೆ ಬೆಳಿಗ್ಗೆ 6 ಗಂಟೆಯಿಂದ ಕೊಪ್ಪಳ ಜಿಲ್ಲೆ ಯಾದ್ಯಂತ ೧೪೪ ನಿಷೇಧಾಜ್ಞೆ ಜಾರಿಮಾಡಲಾಗಿದೆ. ಕಾನೂನು ಹಾಗೂ ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡಲು ನಿಷೇಧಾಜ್ಞೆ ಜಾರಿ. ಮಾಡಿ ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್  ಆದೇಶ ಹೊರಡಿಸಿದ್ದಾರೆ.. ನಾಳೆ ಬೆಳಿಗ್ಗೆ 6 ಗಂಟೆಯಿಂದ  ದಿನಾಂಕ 22ರ ಮಧ್ಯರಾತ್ರಿ 6 ಗಂಟೆ ಯವರೆಗೆ ಜಾರಿ. ಧಾರ್ಮಿಕ ಕಾರ್ಯಕ್ರಮಗಳನ್ನು ಹೊರತುಪಡಿಸಿ ಜಾರಿ. ಮುಂಜಾಗೃತ ಕ್ರಮವಾಗಿ ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಎರ್ಪಡಿಸಲಾಗಿದೆ. ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ಹತ್ತಿಕ್ಕಲು ಸರಕಾರ ಕೈಗೊಂಡಿರುವ ಕ್ರಮಕ್ಕೆ ಪ್ರಗತಿಪರ ಸಂಘಟನೆಗಳವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

Please follow and like us:
error