ಶೃಂಗೇರಿ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಚಿಕ್ಕಮಗಳೂರು, ಜ.10: ಇಂದಿನಿಂದ ಎರಡು ದಿನಗಳ ಕಾಲ ಶೃಂಗೇರಿ ಪಟ್ಟಣದ ಆದಿಚುಂಚನಗಿರಿ ಸಭಾಭವನದ ಪೂರ್ಣಚಂದ್ರ ತೇಜಸ್ವಿ ವೇದಿಕೆಯಲ್ಲಿ ನಡೆಯಲಿರುವ ಚಿಕ್ಕಮಗಳೂರು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಂಡಿದೆ.

ಪರಿಸರ ಹೋರಾಟಗಾರ, ಸಾಹಿತಿ ಕಲ್ಕುಳಿ ವಿಠಲ್ ಹೆಗ್ಗಡೆ ಸಮ್ಮೇಳನದ ಸರ್ವಾಧ್ಯಕ್ಷತೆಯಲ್ಲಿ ಸಮ್ಮೇಳನವನ್ನು ಸ್ವಾಗತ ಸಮಿತಿಯ ಅಧ್ಯಕ್ಷ, ಶಾಸಕ ಟಿ.ಡಿ.ರಾಜೇಗೌಡ ಉದ್ಘಾಟಿಸಿದರು.

ಮಾಜಿ ಸಚಿವ ಕಿಮ್ಮನೆ ರತ್ನಾಕರ, ವಿಧಾನ ಪರಿಷತ್ ಶಾಸಕ ಎಸ್.ಎಲ್.ಬೋಜೇಗೌಡ, ಜಿಲ್ಲಾ ಕಾಂಗ್ರೆಸ್

ಅಧ್ಯಕ್ಷ ಡಾ.ಅಂಶುಮಂತ್, ಹೋರಾಟಗಾರ ಕಡಿದಾಳು ಶ್ಯಾಮಣ್ಣ, ಹೆಗ್ಗೋಡು ಪ್ರಸನ್ನ, ಸಾಹಿತಿ ಕುಂ.ವೀರಭದ್ರಪ್ಪ, ಸಾಹಿತಿ ರಾಜೇಂದ್ರ ಚೆನ್ನಿ, ಜಿಪಂ ಮಾಜಿ ಅಧ್ಯಕ್ಷ ಎಚ್.ಎಂ.ಸತೀಶ್, ಜೆಡಿಎಸ್ ಮುಖಂಡ ಎಚ್.ಟಿ.ರಾಜೇಂದ್ರ ಮತ್ತಿತರರು ಹಾಜರಿದ್ದರು.

ಸಮ್ಮೇಳನದ ವೇದಿಕೆಯ ಹೊರಭಾಗದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

Please follow and like us: