ಯಾದಗಿರಿ,): ಹುಣಸಗಿ ತಾಲ್ಲೂಕಿನ ಕನ್ನೆಳ್ಳಿ ಗ್ರಾಮದ ಇಬ್ಬರು ನಕಲಿ ವೈದ್ಯರ ಕ್ಲಿನಿಕ್‍ಗಳ ಮೇಲೆ ಸುರಪುರ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸರು ಗುರುವಾರ ದಾಳಿ ನಡೆಸಿ, ಕ್ಲಿನಿಕ್‍ಗಳನ್ನು ಬಂದ್ ಮಾಡಿಸಿದ್ದಾರೆ.

ಇಬ್ಬರು ನಕಲಿ ವೈದ್ಯರ ಕ್ಲಿನಿಕ್‍ಗಳನ್ನು ಪರಿಶೀಲಿಸಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜಾ ವೆಂಕಪ್ಪ ನಾಯಕ ಅವರು, ಸದರಿ ನಕಲಿ ವೈದ್ಯರ ಹತ್ತಿರ ಕೆ.ಪಿ.ಎಂ.ಇ. ನೋಂದಣಿ ದಾಖಲೆಗಳು ಇರುವುದಿಲ್ಲ. ನಿಯಮಬಾಹಿರವಾಗಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದು ಕಂಡುಬಂದ ಪ್ರಯುಕ್ತ ಕ್ಲಿನಿಕ್‍ಗಳಿಗೆ ಬೀಗ ಹಾಕಿ ಬಂದ್ ಮಾಡಿಸಲಾಗಿರುತ್ತದೆ. ಸದರಿ ನಕಲಿ ವೈದ್ಯರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಸುರಪುರ ಪೆÇಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಿಗೆ ದೂರು ನೀಡಿರುತ್ತಾರೆ.
ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಆರ್.ಎಂ.ಪಿ./ ನಕಲಿ ವೈದ್ಯರು ವೈದ್ಯಕೀಯ ತಪಾಸಣೆ ಸ್ಥಗಿತಗೊಳಿಸತಕ್ಕದ್ದು. ಒಂದು ವೇಳೆ ಜಿಲ್ಲಾಡಳಿತದ ಸೂಚನೆಯನ್ನು ನಿರ್ಲಕ್ಷಿಸಿದಲ್ಲಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮದಂತೆ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಎಚ್ಚರಿಕೆ ನೀಡಿದ್ದಾರೆ.