ಬಿಪಿಎಲ್ ಕಾರ್ಡ್ ಹೊಂದಿದ ಸರ್ಕಾರಿ ನೌಕರರು ಕೂಡಲೇ ಕಾರ್ಡ್ ಹಿಂದುರುಗಿಸಲು ಆದೇಶ


ಮೈಸೂರು.:- ಬಿ.ಪಿ.ಎಲ್ ಪಡಿತರ ಚೀಟಿಗಳನ್ನು ಬಡತನ ರೇಖೆಗಿಂತ ಕೆಳಗಿರುವ ಬಡವರು ಹೊರತು ಪಡಿಸಿ ಸರ್ಕಾರಿ/ಸರ್ಕಾರದ ನಿಗಮ/ಮಂಡಳಿ/ಪ್ರಾಧಿಕಾರ/ ವಿಶ್ವ ವಿದ್ಯಾಲಯ/ ಸಂಸ್ಥೆಯ ಅಧಿಕಾರಿ/ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರು ಹೊಂದಿರುವುದು ಅಕ್ಷಮ್ಯ ಅಪರಾಧವಾಗಿದ್ದು, ಅಂತÀವರು ತಿಂಗಳೊಳಗಾಗಿ ಬಿಪಿಎಲ್ ಕಾರ್ಡ್ ಅನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಕೂಡಲೇ ಹಿಂದಿರುಗಿಸಿ ಕಾರ್ಡ್‍ನ್ನು ರದ್ದುಪಡಿಸಿಕೊಳ್ಳತಕ್ಕದ್ದು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಮಾಡಿದ್ದಾರೆ
ಒಂದು ತಿಂಗಳ ನಂತರವೂ ಅಧಿಕಾರಿ/ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರು ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಬಗ್ಗೆ ಮಾಹಿತಿ/ದೂರುಗಳು ಸ್ವೀಕೃತವಾದರೆ, ಅಂತಹ ಅಧಿಕಾರಿ/ನೌಕರರ ವಿರುದ್ಧ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಹಾಗೂ ಅವರಿಂದ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಸಹ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.

Please follow and like us: