ಬೋನಿಗೆ ಬಿದ್ದ ಚಿರತೆ

ರಾಮನಗರ : ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದು ಸೆರೆಯಾಗಿದೆ. ರಾಮನಗರ ತಾಲ್ಲೂಕಿನ ಜೋಗಿದೊಡ್ಡಿ ಗ್ರಾಮದಲ್ಲಿ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಓರ್ವ ವ್ಯಕ್ತಿ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಬೋನಿಟ್ಟು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದರು. ಗ್ರಾಮಸ್ಥರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆಯವರು ಬೋನು ಇಟ್ಟಿದ್ದರು. ಇಂದು ಬೆಳಗಿನ ಜಾವ ಚಿರತೆ ಬೋನಿಗೆ ಬಿದ್ದಿದೆ. ಇದರಿಂದ ಸುತ್ತ ಮುತ್ತಲಿನ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರುಬಿಟ್ಟಿದ್ದಾರೆ

Please follow and like us: