ಕೊರೊನಾ ಚಿಕಿತ್ಸೆಗೆ ಹಾಸಿಗೆಗಳ ಕೊರತೆ ಇಲ್ಲ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಚಿಕಿತ್ಸೆಗೆ 6,364 ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಕೇರ್‍ಸೆಂಟರ್‍ಗಳಿಗೆ ಈಗಾಗಲೇ 500 ಬೆಡ್‍ಗಳನ್ನು 5 ಆಯುರ್ವೇದ ಆಸ್ಪತ್ರೆಗಳನ್ನು ಗುರುತಿಸಿದೆ. ಕಿಮ್ಸ್ ಆಸ್ಪತ್ರೆಯಲ್ಲಿ 250 ಬೆಡ್‍ಗಳ ವ್ಯವಸ್ಥೆ ಇದೆ. ಅದರಲ್ಲಿ ಈಗಾಗಲೇ 190 ಬೆಡ್‍ಗಳು ಭರ್ತಿಯಾಗಿವೆ. ಇನ್ನೂ 60 ಬೆಡ್ ಖಾಲಿ ಇವೆ. ಹಾಗೂ ಎಸ್.ಡಿ.ಎಮ್ ಆಸ್ಪತ್ರೆಯಲ್ಲಿ 100 ಬೆಡ್‍ಗಳಿವೆ. ಹೀಗಾಗಿ ಕೋವಿಡ್ ಸೋಂಕಿತರಿಗೆ ಬೆಡ್‍ಗಳನ್ನು ಒದಗಿಸಲು ಯಾವುದೇ ಸಮಸ್ಯೆಗಳು ಇಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಇಂದು ಬೆಳಿಗ್ಗೆ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮ್ಮಲ್ಲಿ ಬೆಡ್‍ಗಳಿಗೆ ಯಾವುದೇ ರೀತಿ ತೊಂದರೆಗಳಿಲ್ಲ. ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ 955 ಹಾಸಿಗೆಗಳನ್ನು ಗುರುತಿಸಲಾಗಿದೆ. ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಸುಮಾರು 6,000 ಹಾಸಿಗೆಗಳನ್ನು ಗುರುತಿಸಲಾಗಿದೆ ಎಂದು ಅವರು ಹೇಳಿದರು.

ಧಾರವಾಡದಲ್ಲಿ 17 ಕೋವಿಡ್ ಆಸ್ಪತ್ರೆಗಳಿವೆ. ಅದರಲ್ಲಿ ಚಿಕಿತ್ಸೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡಲಾಗುವುದು ಎಂದರು. ಕಿಮ್ಸ್ ಆಸ್ಪತ್ರೆಗಳಲ್ಲಿ ಸಾಕಷ್ಟು ವೈದ್ಯರು ಹಾಗೂ ಸ್ಟಾಫ್ ನರ್ಸ್‍ಗಳು ಇರುವುದರಿಂದ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ನರ್ಸ್‍ಗಳ ಕೊರತೆಯಿಲ್ಲ ಎಂದರು.

ನಂತರ ಹುಬ್ಬಳ್ಳಿಯ ವಿವೇಕಾನಂದ ಆಸ್ಪತ್ರೆ ಕುರಿತು ಮಾಹಿತಿ ನೀಡಿದ ಅವರು, ವಿವೇಕಾನಂದ ಆಸ್ಪತ್ರೆಯಲ್ಲಿ ಎರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ನಂತರ ಕಿಮ್ಸ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆದರೆ ಆರೋಗ್ಯ ಅಧಿಕಾರಿಗಳು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ ತಿಳಿಸಿದ್ದರೂ ಸಹ ವಿವೇಕಾನಂದ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ಕಳುಹಿಸಿದ್ದಾರೆ.

ವಿವೇಕಾನಂದ ಆಸ್ಪತ್ರೆ ಖಾಸಗಿ ಕೋವಿಡ್ ಆಸ್ಪತ್ರೆಗಳ ಪಟ್ಟಿಯಲ್ಲಿದೆ. ಕೋವಿಡ್ ಆಸ್ಪತ್ರೆಗಳ ಮೊದಲ ಸ್ಥಾನದಲ್ಲಿದ್ದರೂ ಪ್ರಕರಣ ದೃಢಪಟ್ಟ ವ್ಯಕ್ತಿಗೆ ಚಿಕಿತ್ಸೆ ನೀಡದಿರುವುದಕ್ಕೆ ನೋಟಿಸ್ ನೀಡಲಾಗುವುದು. ಯಾವುದೇ ವ್ಯಕ್ತಿ ದಾಖಲಾದರೂ ಅವರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಅವರನ್ನು ನಿರಾಕರಿಸಬಾರದು ಎಂದು ಹೇಳಿದರು.

ವಾಟ್ಸ್ ಆಪ್ ಟಪಾಲು : ಕಚೇರಿಗಳಲ್ಲಿ ಸೋಂಕು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ದೂರದ ಊರುಗಳಿಂದ ಕಚೇರಿಗೆ ಬರದೆ ವಾಟ್ಸ್‍ಆಪ್ ನಂಬರ್ 9449847641 ಗೆ ತಮ್ಮ ಮನವಿ ಮಾಡಿಕೊಂಡರೆ ಅದನ್ನು ಪರಿಶೀಲನೆ ಮಾಡಿ, ವಾಟ್ಸ್‍ಆಪ್ ಮೂಲಕ ಪ್ರತಿಕ್ರಿಯೆ ಕಳುಹಿಸಲಾಗುತ್ತದೆ. ಯಾರೂ ಕೂಡಾ ದೂರದ ಊರಿನಿಂದ ಜಿಲ್ಲಾ ಕೇಂದ್ರಕ್ಕೆ ಬರುವುದು ಬೇಡ ಎಂದು ರೈತರಿಗೆ ಹಾಗೂ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮನವಿ ಮಾಡಿಕೊಂಡರು.


Please follow and like us: