ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ: ಜಿಲ್ಲಾಧಿಕಾರಿರಾಮನಗರ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ: ಜಿಲ್ಲಾಧಿಕಾರಿ


ರಾಮನಗರ:- ಜಿಲ್ಲೆಯಾದ್ಯಂತ ಕೋವಿಡ್ ನಿಯಂತ್ರಣದಲ್ಲಿದ್ದು ಇದುವರೆಗೆ ಒಟ್ಟು 389 ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 224 ಮಂದಿ ಗುಣಮುಖರಾಗಿದ್ದಾರೆ. ಇನ್ನೂ 157 ಪ್ರಕರಣಗಳು ಸಕ್ರಿಯವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಇಂದು ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದರು.
ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿ ಕುರಿತಂತೆ ಮುಖ್ಯಮಂತ್ರಿಗಳು ಬೆಂಗಳೂರಿನಿAದ ಸೋಮವಾರ ನಡೆಸಿ ವಿಡಿಯೋ ಕಾನ್ಫರೆನ್ಸ್ನಲ್ಲಿ ರಾಮನಗರದಿಂದ ಭಾಗವಹಿಸಿದ್ದು ಜಿಲ್ಲಾಧಿಕಾರಿಗಳು, ಪರಿವರ್ತಿಸಲಾಗಿರುವ ಕಂದಾಯ ಭವನದಲ್ಲಿರುವ ಕೋವಿಡ್-19 ರೆಫೆರೆಲ್ ಆಸ್ಪತ್ರೆಯಲ್ಲಿ ಒಟ್ಟು 106 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇನ್ನುಳಿದ 51 ಮಂದಿಗೆ ಕೆಂಗೇರಿ ಸಮೀಪದ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.
ಕೋವಿಡ್ ಕೇರ್: ಜಿಲ್ಲೆಯಲ್ಲಿ ಉತ್ತಮ ಆಸ್ಪತ್ರೆಗಳು ಇಲ್ಲದಿರುವ ಹಿನ್ನೆಲೆಯಲ್ಲಿ ಪ್ರತಿ ತಾಲ್ಲೂಕಿನಲ್ಲಿ 500 ಹಾಸಿಗೆಗಳ ಕೋವಿಡ್-19 ಕೇರ್ ಸೆಂಟರ್ ಅನ್ನು ತೆರೆಯಲಾಗುತ್ತಿದೆ. ಮೊದಲ ಹಂತದಲ್ಲಿ ಈಗಾಗಲೇ ನಾಲ್ಕು ತಾಲ್ಲೂಕುಗಳಲ್ಲಿ ಒಟ್ಟು 570 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಅನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಅವರು ವಿವರಿಸಿದರು.
ಉತ್ತಮ ಮಳೆ: ಜಿಲ್ಲೆಯಲ್ಲಿ ವಾಡಿಕೆಗಿಂತ ಉತ್ತಮವಾಗಿ ಮಳೆಯಾಗಿದ್ದು, ಶೇ. 35ರಷ್ಟು ಹೆಚ್ಚಿಗೆ ಆಗಿದೆ. ಜಿಲ್ಲೆಯಲ್ಲಿ ಜುಲೈ ಕೊನೆಯ  ಮತ್ತು ಆಗಸ್ಟ್ ಮೊದಲ ವಾರದಲ್ಲಿ ಬಿತ್ತನೆ ಕಾರ್ಯವನ್ನು ರೈತರು ಕೈಗೊಳ್ಳುತ್ತಾರೆ. ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ಗೊಬ್ಬರದ ಸಂಗ್ರಹವಿದ್ದು, ಯಾವುದೇ ಕೊರತೆ ಇಲ್ಲದಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.
ನೀರು ಪೂರೈಕೆ: ಜಿಲ್ಲೆಯಲ್ಲಿ ಮಾಗಡಿ ಹೊರತು ಪಡಿಸಿ ಇನ್ನುಳಿದ ಮೂರು ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿಲ್ಲ. ಮಾಗಡಿ ತಾಲ್ಲೂಕಿನ ಕೆಲವು ಕಡೆಗಳಲ್ಲಿ ಮಾತ್ರ ಮಾಸಿಕ ಬಾಡಿಗೆ ಆಧಾರದಮೇಲೆ ಟ್ಯಾಂಕರ್ ನೀರನ್ನು ಪೂರೈಸಲಾಗುತ್ತಿದೆ. ಇಂತಹ ಪ್ರದೇಶಗಳಲ್ಲಿ ನೀರಿನ ವ್ಯವಸ್ಥೆಗಾಗಿ ಬೋರ್‌ವೆಲ್ ಕೊರೆಯಿಸಿದರು ನೀರು ಲಭ್ಯವಾಗದ ಕಾರಣ ಅನಿವಾರ್ಯವಾಗಿ ಟ್ಯಾಂಕರ್‌ನಿAದ ನೀರು ಪೂರೈಸಲಾಗುತ್ತಿದೆ ಎಂದು ಅರ್ಚನಾ ಅವರು ಮಾಹಿತಿ ನೀಡಿದರು.

Please follow and like us: