ಕೋವಿಡ್ ತಡೆ ಉದ್ದೇಶಕ್ಕೆ ಜಿಲ್ಲಾ ಖನಿಜ ಪ್ರತಿಷ್ಟಾನ ನಿಧಿ ಬಳಕೆ : ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ


ಚಾಮರಾಜನಗರ, – ಜಿಲ್ಲಾ ಖನಿಜ ಪ್ರತಿಷ್ಟಾನ ನಿಧಿಯಲ್ಲಿ ಮಾರ್ಚ್ 2020ರ ಅಂತ್ಯಕ್ಕೆ ಬಾಕಿ ಉಳಿದಿರುವ ಶೇ. 30ರಷ್ಟು ನಿಧಿಯನ್ನು ಅಂದರೆ 3 ಕೋಟಿ 11 ಲಕ್ಷ ರೂ. ಗಳನ್ನು ಕೊರೋನಾ ವೈರಸ್ ರೋಗ ತಡೆ ಉದ್ದೇಶಕ್ಕೆ ಸದ್ಭಳಕೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಡಾ. ಎಂ.ಆರ್. ಅವರು ಸೂಚನೆ ನೀಡಿದರು.
ಆರೋಗ್ಯ ಅಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸೇರಿದಂತೆ ಆರೋಗ್ಯ ಸಂಬಂಧಿ ಇಲಾಖೆಗಳೊಂದಿಗೆ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಮ್ಯಾನೇಜ್‍ಮೆಂಟ್ ಕಮಿಟಿ ಸಭೆಯನ್ನು ಜೂಮ್ ಅ್ಯಪ್ ಮೂಲಕ ನಡೆಸಿ ಅವರು ಮಾತನಾಡಿದರು.
ಜಿಲ್ಲಾ ಖನಿಜ ಪ್ರತಿಷ್ಟಾನ ನಿಧಿಯಲ್ಲಿ ಶೇ. 30ರಷ್ಟನ್ನು ಕೊರೊನಾ ವೈರಾಣು ಹರಡುವಿಕೆ ತಡೆಯುವ ಆರೋಗ್ಯ ಸಂಬಂಧಿ ಉದ್ದೇಶಗಳಿಗೆ ಬಳಕೆ ಮಾಡಿಕೊಳ್ಳಲು ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್‍ನ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಅನುಮತಿ ನೀಡಿದ್ದಾರೆ. ಈ ಹಣವನ್ನು ಬಳಸಿ ಕೊರೊನಾ ನಿಯಂತ್ರಣಕ್ಕೆ ಅಗತ್ಯವಿರುವ ಔಷಧ, ರೋಗ ಸಂಬಂಧಿ ಪರೀಕ್ಷೆ ಸಾಮಗ್ರಿಗಳು ಮತ್ತು ಮುನ್ನೆಚ್ಚರಿಕೆಗಾಗಿ ತೆಗೆದುಕೊಳ್ಳಬೇಕಾದ ಇನ್ನಿತರ ವೈದ್ಯಕೀಯ ಪರಿಕರಗಳಿಗೆ ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಜಿಲ್ಲಾ ಆಸ್ಪತ್ರೆಗೆ ಅಗತ್ಯವಿರುವ ಔಷಧಗಳು, ಇತರೆ ತುತು ವೈದ್ಯಕೀಯ ವಸ್ತುಗಳು, ಇತರೆ ಸೌಲಭ್ಯಗಳಿಗೆ ಹಣ ಸದ್ಭಳಕೆಯಾಗಬೇಕು. ಈ ನಿಟ್ಟಿನಲ್ಲಿ ರೂಪುರೇಷೆ ಸಿದ್ಧಪಡಿಸಿ ನಿರ್ಧಾರ ತೆಗೆದುಕೊಳ್ಳಬೇಕಿದೆ. ಈ ಪ್ರಕ್ರಿಯೆಗೆ ತುರ್ತಾಗಿ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.
ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕೋವಿಡ್ ಹಿನ್ನೆಲೆಯಲ್ಲಿ ಮತ್ತಷ್ಟು ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಜಿಲ್ಲಾ ಖನಿಜ ಪ್ರತಿಷ್ಠಾನದ ನಿಧಿ ಬಳಕೆ ಮಾಡಿಕೊಳ್ಳಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಪ್ರಕ್ರಿಯೆ ಕೈಗೊಂಡು ಸೂಕ್ತ ಉದ್ದೇಶಗಳಿಗೆ ಉಪಯೋಗಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ವಿಶೇಷವಾಗಿ ಆಂಬುಲೆನ್ಸ್‍ಗಳ ಖರೀದಿಗೆ ಆದ್ಯತೆ ನೀಡಬೇಕಿದೆ. ಗಣಿ ಬಾಧಿತ ಪ್ರದೇಶಗಳ ಜನತೆಗೂ ಆರೋಗ್ಯ ಸೇವೆಗೆ ನೆರವಾಗಲು ಆಂಬುಲೆನ್ಸ್‍ಗಳನ್ನು ಬಳಕೆ ಮಾಡಬಹುದಾಗಿದೆ. ದೀರ್ಘಕಾಲಕ್ಕೆ ಸಹಾಯವಾಗುವ ಉದ್ದೇಶಗಳಿಗೆ ಖನಿಜ ಪ್ರತಿಷ್ಠಾನ ನಿಧಿ ಉಪಯೋಗ ಮಾಡುವುದರಿಂದ ಸಾರ್ಥಕತೆ ಉಂಟಾಗುತ್ತದೆ. ಹೀಗಾಗಿ ಅವಶ್ಯವಿರುವ ಕ್ರಮಗಳಿಗೆ ಮುಂದಾಗುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್. ಅವರು ತಿಳಿಸಿದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರಾದ ಲಕ್ಷ್ಮಮ್ಮ, ಜಿಲ್ಲಾ ಆರೋಗÀ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಆರ್. ರವಿ, ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಡೀನ್ ಡಾ. ಸಂಜೀವ್, ಇತರೆ ಆರೋಗ್ಯ ಅಧಿಕಾರಿಗಳು, ಇತರೆ ಇಲಾಖೆಗಳ ಅಧಿಕಾರಿಗಳು ಇದ್ದರು.

Please follow and like us: