ಬಾಗಲಕೋಟೆ 77 ಜನ ಗುಣಮುಖ, 83 ಹೊಸ ಪ್ರಕರಣಗಳು ದೃಡ

ಬಾಗಲಕೋಟೆ: ಜಿಲ್ಲೆಯಲ್ಲಿ 77 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 53 ಕೊರೊನಾ ಪ್ರಕರಣಗಳು ಸೋವವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 5335 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 4498 ಜನ ಗುಣಮುಖರಾಗಿದ್ದಾರೆ. ಹೊಸದಾಗಿ ದೃಡಪಟ್ಟವರಲ್ಲಿ ಬಾಗಲಕೋಟೆ ತಾಲೂಕು 27, ಬಾದಾಮಿ 13, ಹುನಗುಂದ 10, ಬೀಳಗಿ 4, ಮುಧೋಳ 20, ಜಮಖಂಡಿ 7 ಹಾಗೂ ಬೇರೆ ಜಿಲ್ಲೆಯ ಇಬ್ಬರು ಇದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 889 ಸ್ಯಾಂಪಲಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಪ್ರತ್ಯೇಕವಾಗಿ 495 ಜನ ನಿಗಾದಲ್ಲಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 50566 ಸಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 45233 ನೆಗಟಿವ್ ಪ್ರಕರಣ, 5335 ಪಾಜಿಟಿವ್ ಪ್ರಕರಣ ಹಾಗೂ 66 ಜನ ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 771 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 210 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 585 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾಂರಂಟೈನ್‍ನಲ್ಲಿದ್ದ 8455 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Please follow and like us: