ಜಿಲ್ಲೆಯ ಮೊದಲ ಫಿಲ್ಮ್ ಇನ್ಸ್ಟಿಟ್ಯೂಟ್ ಪ್ರಾರಂಭ

**ಪೃಥ್ವಿ ಫಿಲ್ಮ್ ಇನ್ಸ್ಟಿಟ್ಯೂಟ್  ಜಿಲ್ಲೆಯ ಕಲಾವಿದರಿಗೆ ಉತ್ತಮ ವೇದಿಕೆಯಾಗಲಿ ; ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರು*
ಕನ್ನಡನೆಟ್ ಕೊಪ್ಪಳ, 1: ಜಿಲ್ಲೆಯ ರಂಗಭೂಮಿ ಹಾಗೂ ಸಿನಿಮಾ ಕಲಾವಿದರಿಗೆ ಪೃಥ್ವಿ ಫಿಲ್ಮ್ ಇನ್ಸ್ಟಿಟ್ಯೂಟ್ ಸಂಸ್ಥೆಯು ಒಂದು ಉತ್ತಮ ವೇದಿಕೆಯಾಗಲಿದೆ ಎಂದು ಜಿಲ್ಲೆಯ ಹಿರಿಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರು ಅವರು ಹೇಳಿದರು.
         ಇಂದು ನಗರದ ಹುಡ್ಕೋ ಕಾಲೋನಿಯ ಬಸವ ಕಾಂಪ್ಲೆಕ್ಸ್ ನ 3ನೇ ಮಹಡಿಯಲ್ಲಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ನೂತನವಾಗಿ ಪ್ರಾರಂಭಗೊAಡ ಪೃಥ್ವಿ ಫಿಲ್ಮ್ ಇನ್ಸ್ಟಿಟ್ಯೂಟ್ ನ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
         ಬುದ್ಧ – ಬಸವ ಭಾವಚಿತ್ರಕ್ಕೆ ಪುಷ್ಪರ್ಚನೆ ನೆರವೇರಿಸಿ ಮಾತನಾಡಿದ ಅವರು ಸಮೂಹ ಸಂವಹನ ಮಾಧ್ಯಮಗಳಲ್ಲಿ ಸಿನಿಮಾ ಒಂದು ಪ್ರಭಾವಿ ಮಾಧ್ಯಮವಾಗಿದ್ದು, ಜನ ಸಾಮಾನ್ಯರ ಅನೌಪಚಾರಿಕ ಶಿಕ್ಷಣ ನೀಡುತ್ತಿದೆ. ಜಿಲ್ಲೆಯ ಆಸಕ್ತ ಕಲಾವಿದರು ಸಿನಿಮಾ ರಂಗಕ್ಕೆ ಪ್ರವೇಶಿಸಬೇಕೆಂಬುವವರು ಸಿನಿಮಾ ತರಬೇತಿ ಪಡೆದಿದಲ್ಲಿ ಉತ್ತಮ ನಟನೆ ಜೊತೆಗೆ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಿನಿಮಾ ತರಬೇತಿ ಅವಶ್ಯಕತೆಯಾಗಿದೆ ಎಂದು ತಿಳಿಸಿದರು.
            ಮುಖ್ಯ ಅಥಿತಿಯಾಗಿ ಆಗಮಿಸಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಸುರೇಶ್ ಜಿ. ಅವರು ಮಾತನಾಡಿ, ಉತ್ತರ ಕರ್ನಾಟಕ ಪ್ರದೇಶದಲ್ಲಿ ಸಿನಿಮಾ ತರಬೇತಿ ಕೇಂದ್ರಗಳ ಅವಶ್ಯಕತೆ ಇದ್ದು, ಕೊಪ್ಪಳ ಜಿಲ್ಲೆಯಲ್ಲಿ ಮೊದಲ ಬಾರಿಗೆ ಪ್ರಾರಂಭಗೊAಡಿರುವುದು ಬಹಳ ಸಂತಸ ತಂದಿದೆ. ಈ ಭಾಗದ ಆಸಕ್ತ ರಂಗ ಕಲಾವಿದರು ಸಿನಿಮಾ ತರಬೇತಿಯನ್ನು ಪಡೆಯಲು ಅತ್ಯುತ್ತಮ ವೇದಿಕೆಯಾಗಿ ಹೊರಹೊಮ್ಮಲಿ ಎಂದು ಆಶಿಸಿದರು.
           ಜಿಲ್ಲೆಯ ಮತ್ತೋರ್ವ ಹಿರಿಯ ಸಾಹಿತಿ ಮಹಾಂತೇಶ ಮಲ್ಲನ್ ಗೌಡರ್ ಅವರು ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಚುರುಕುಗೊಂಡಿದ್ದು, ಸಿನಿಮಾ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಕಂಡುಬರುತ್ತಿದೆ. ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಉತ್ತಮ ಕಿರು ಚಿತ್ರಗಳಿಗೆ ಆಹ್ವಾನವಿದ್ದು, ರಾಜ್ಯ ಸರ್ಕಾರದಿಂದ ಒಂದು ಲಕ್ಷ ರೂಪಾಯಿಯವರೆಗೆ ಬಹುಮಾನ ಹಾಗೂ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಉತ್ತಮ ಕಿರುಚಿತ್ರಗಳ ನಿರ್ಮಾಣಕ್ಕೆ ತರಬೇತಿ ತುಂಬಾ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಕಲಾವಿದರನ್ನು ಪೃಥ್ವಿ ಫಿಲ್ಮ್ ಇನ್ಸ್ಟಿಟ್ಯೂಟ್ ಕೇಂದ್ರವು ಕಾರ್ಯೋನ್ಮುಖವಾಗಲಿ ಎಂದು ಹಾರೈಸಿದರು.
             ಸುವರ್ಣ ನ್ಯೂಸ್ ಚಾನೆಲ್ ಜಿಲ್ಲಾ ವರದಿಗಾರ ದೊಡ್ಡೇಶ್ ಯಲಿಗಾರ್ ಅವರು ಮಾತನಾಡಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಪ್ರಾರಂಭಗೊಳ್ಳುತ್ತಿರುವುದು ಸಂತಸ ತಂದಿದ್ದು ಅತ್ಯುನ್ನತ ಸಿನಿಮಾ ತರಬೇತಿ ಕೇಂದ್ರವಾಗಿ ಹೊರ ಹೊಮ್ಮಲಿ ಎಂದು ಶುಭ ಹಾರೈಸಿದರು.           ಕಾರ್ಯಕ್ರಮದಲ್ಲಿ ರಾಜ್ಯ ವಕೀಲರ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ವಿಜಯ ಅಮೃತ ರಾಜ್, ಪ್ರಜಾವಾಣಿ ಜಿಲ್ಲಾ ವರದಿಗಾರ ಸಿದ್ದನಗೌಡ ಪಾಟೀಲ್, ನಿವೃತ್ತ ಉಪನ್ಯಾಸಕಾರದ ಶಿವಪ್ಪ ತೊಂಡಿಹಾಳ್, ಉಪನ್ಯಾಸಕ ಅಶೋಕ ಓಜನಹಳ್ಳಿ, ಶಿಕ್ಷಕರುಗಳಾದ ಅಲಿ ನವಾಜ್, ಕನಕಪ್ಪ, ಸಾಹಿತಿ ಸುರೇಶ್ ಕಂಬ್ಳಿ, ಕಲಾವಿದರಾದ ಹನುಮಂತಪ್ಪ ಕುರಿ, ರೇವನಸಿದ್ದಪ್ಪ ಕೋಳೂರು, ದೇವೇಂದ್ರಪ್ಪ ಕಮ್ಮಾರ್ ಹಾಗೂ ಪೃಥ್ವಿ ಫಿಲ್ಮ್ ಇನ್ಸ್ಟಿಟ್ಯೂಟ್ ಸಂಯೋಜಕ ಕೋಳೂರು ರಂಗನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Please follow and like us: