ಇನ್ನೂ ಮೂರೇ ತಿಂಗಳಲ್ಲಿ ಕಾಂಗ್ರೆಸ್ ಗೆ ನಾಯಕರ ಒಳಹರಿವು ಆರಂಭವಾಗಲಿದೆ-ಹಿಟ್ನಾಳ

ಕೊಪ್ಪಳ: ಬಿಜೆಪಿ ಆಡಳಿತ ಜನರಿಗೆ ರೋಸಿ ಹೋಗಿದೆ. ಈಗಾಗಲೇ ಜನರಿಗೆ ಬಿಜೆಪಿ ಬಂಡವಾಳ ಗೊತ್ತಾಗಿದೆ. ಇನ್ನೂ ಎರಡು-ಮೂರು ತಿಂಗಳಲ್ಲಿ ಬಿಜೆಪಿ ಬಣ್ಣ ಬಯಲಾಗಲಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಸೇರುವವರ ಸಂಖ್ಯೆ ಜಾಸ್ತಿಯಾಗಿಲ್ಲ. ಬಿಜೆಪಿ ತೊರೆದು ಕಾಂಗ್ರೆಸ್ ಸೇರುವವರು ಹರಿವು ಹೆಚ್ಚುತ್ತಿದೆ. ಕೆಲವೇ ತಿಂಗಳು ಕಾದು ನೋಡಿ, ಗೊತ್ತಾಗುತ್ತೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು. ವಿಧಾನಸೌಧ ಅಧಿವೇಶನದಿಂದ, ಕೆಡಿಪಿ ಸಭೆಯಿಂದಲೂ ಪತ್ರಕರ್ತರನ್ನು ಹೊರ ಹಾಕಲಾಗಿದೆ. ಆದರೆ ಯಾಕೋ ಇದರ ಬಗ್ಗೆ ಮಾಧ್ಯಮದವರು ಧ್ವನಿ ಎತ್ತುತ್ತಿಲ್ಲ. ಜಿಲ್ಲೆಯ ಯಾವ ನಾಯಕರು ಬಿಜೆಪಿ ಸೇರಲ್ಲ. ಬದಲಿಗೆ ಇನ್ನೂ ಮೂರು ತಿಂಗಳಲ್ಲಿ ಕಾಂಗ್ರೆಸ್ ಬರುವ ನಾಯಕರ ಸಂಖ್ಯೆ ಹೆಚ್ಚಾಗಲಿದೆ ಎಂದು ಹೇಳಿದರು.

Please follow and like us: