ರಮೇಶ್ ಜಾರಕಿಹೊಳಿ ವಿರುದ್ಧ ಎಫ್.ಐ.ಆರ್. ದಾಖಲಿಸಿ ತನಿಖೆಯಾಗಲಿ: ಸಿದ್ದರಾಮಯ್ಯ

ಬೆಂಗಳೂರು, ಮಾ.3: ಅಶ್ಲೀಲ ವೀಡಿಯೋ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಎಫ್.ಐ.ಆರ್. ದಾಖಲಿಸಿ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರಕಾರದಲ್ಲಿರುವವರಿಗೆ ಮಾನ ಮರ್ಯಾದೆ ಇದ್ದರೆ ಕೂಡಲೇ ರಮೇಶ್ ಜಾರಕಿಹೋಳಿ ರಾಜೀನಾಮೆ ಪಡೆಯಬೇಕು. ಇಡೀ ದೇಶದ ಜನಕ್ಕೆ ಈ ಬಗ್ಗೆ ಮಾಹಿತಿ ಗೊತ್ತಾಗಿದೆ. ಕೂಡಲೇ  ಸಚಿವ ರಮೇಶ್ ಜಾರಕಿಹೋಳಿ ವಿರುದ್ದ ಎಫ್.ಐ.ಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದರು.

Please follow and like us: