ಆರೋಗ್ಯದಲ್ಲಿ ಏರುಪೇರು: ಎಸ್‌ಕೆ‌ಎನ್‌ಜಿ ಕಾಲೇಜು ವಿದ್ಯಾರ್ಥಿ ಸಾವು

ಕೊಪ್ಪಳ (ಗಂಗಾವತಿ): ಇಂದು ನಸುಕಿನ ಜಾವ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದರಿಂದ ಗಂಗಾವತಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಮ್ಮ ಸರಕಾರಿ ಪ್ರಥಮ ಸರ್ಜೆ ಕಾಲೇಜಿನಲ್ಲಿ ಬಿಕಾಂ ಮೂರನೇ ಸೆಮೆಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಹನುಮೇಶ್ ಹಂಚಿನಾಳ (20) ಸಾವನ್ನಪ್ಪಿದ್ದಾನೆ. ಆಸ್ಪತ್ರೆ ತಲುಪುವಷ್ಟರಲ್ಲಿ ವಿದ್ಯಾರ್ಥಿ ಪ್ರಾಣಪಕ್ಷಿ ಹಾರಿ ಹೋಗಿತ್ತು. ಬಾಯಲ್ಲಿ ನೊರೆ ಕಾಣಸಿಕೊಂಡಿದ್ದರಿಂದ ಸಾವಿಗೆ ನಿಖರ ಕಾರಣಗಳು ತಿಳಿಯಲು ಶವಪರೀಕ್ಷೆ ಮಾಡಬೇಕು. ಬಳಿಕವಷ್ಟೇ ವಿದ್ಯಾರ್ಥಿಯ ಸಾವಿಗೆ ಕಾರಣ ಗೊತ್ತಾಗುತ್ತದೆ ಎಂದು ಆಸ್ಪತ್ರೆಯ ವೈದ್ಯಸಿಬ್ಬಂದಿ ತಿಳಿಸಿದ್ದಾರೆ. ಮೃತ ವಿದ್ಯಾರ್ಥಿ ಆತ್ಮಕ್ಕೆ ಶಾಂತಿ ಕೋರಿ ಕಾಲೇಜಿನಲ್ಲಿ ಮೌನ ಆಚರಿಸಲಾಯಿತು.

Please follow and like us: