ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ

ಕೊಪ್ಪಳ,  : ರಾಷ್ಟಿçÃಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ 28 ಶುಶ್ರೂಷಕಿಯರು ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕದಲ್ಲಿ ಖಾಲಿ ಇರುವ ಎಪಿಡೆಮೆಲಾಜಿಸ್ಟ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ಪ್ರಕಟಿಸಲಾಗಿದ್ದು, ಆಯ್ಕೆ ಪಟ್ಟಿ ಕುರಿತಂತೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.


ಆಯ್ಕೆ ಪಟ್ಟಿಗಳನ್ನು ಜಾಲತಾಣ  https://koppal.nic.in    ನಲ್ಲಿ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ತುರ್ತಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ನಿಯೋಜಿಸಬೇಕಾಗಿರುವುದರಿಂದ ಆಕ್ಷೇಪಣೆಗಳನ್ನು ಸಲ್ಲಿಸುವವರು ಲಿಖಿತ ರೂಪದಲ್ಲಿ ಮೇ 15 ರ ಬೆಳಿಗ್ಗೆ 11.30ರ ಒಳಗಾಗಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಛೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ ಈ ವಿಳಾಸಕ್ಕೆ ಅಥವಾ ಇ-ಮೇಲ್ ವಿಳಾಸ  rchokoppal4@gmail.com    ಗೆ ಸಲ್ಲಿಸಲು ಸೂಚಿಸಲಾಗಿದೆ. ಕೊನೆಯ ದಿನಾಂಕದ ನಂತರ ಬರುವ ಆಕ್ಷೇಪಣೆಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಉಪಾಧ್ಯಕ್ಷರು  ತಿಳಿಸಿದ್ದಾರೆ.

Please follow and like us: