ಹಾವೇರಿ ಜಿಲ್ಲಾ ಕಾನಿಪ ಸಂಘದ ರಾಮು ಮುದಿಗೌಡರು ರಸ್ತೆ ಅಪಘಾತದಲ್ಲಿ ನಿಧನ -ಸಂತಾಪ

ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹೃದಯಾಘಾತದಿಂದ ನಿಧನ

ಹಾವೇರಿ : ಹಾವೇರಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ, ಹಿರೇಕೆರೂರು ತಾಲೂಕ ವಿಜಯ ಕರ್ನಾಟಕ ದಿನಪತ್ರಿಕೆಯ ವರದಿಗಾರರಾದ ರಾಮು ಮುದಿಗೌಡರು (55) ತಡ ರಾತ್ರಿ ಹಿರಿಯೂರು ಬಳಿ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.

ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದ ಅವರ ಸಹೋದರಿಯನ್ನು ಆ್ಯಂಬುಲೆನ್ಸ್ ನಲ್ಲಿ ಹಿರೆಕೆರೂರಿಗೆ ತೆಗೆದುಕೊಂಡು ಹೋಗುತ್ತಿದ್ದಾಗ ಹಿಂಬದಿಯಲ್ಲಿದ್ದ ವಾಹನ ಅಪಘಾತವಾಗಿ ಈ ದುರಂತ ಸಂಭವಿಸಿದ್ದು ವಿಧಿ ವಿಪರ್ಯಾಸ. ಸಹೋದರ & ಸಹೋದರಿ ಸಾವಾಗಿರುವುದು ನೋವಿನ ಸಂಗತಿ.

ಪತ್ನಿ ಮತ್ತು ಇಬ್ಬರು ಮಕ್ಕಳು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಹಿರೇಕೆರೂರ ತಾಲೂಕು ಕಸಾಪ ಅಧ್ಯಕ್ಷರಾಗಿದ್ದ ರಾಮು, ಹಿರೇಮೊರಬ ಗ್ರಾಮದ ವಿಎಸ್ಎಸ್ ಬ್ಯಾಂಕ್‌ನ ಅಧ್ಯಕ್ಷರಾಗಿ, ಹಿರೇಕೆರೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯರಾಗಿ ಕೆಲಸ ಮಾಡುತ್ತಿದ್ದರು. ಹಾವೇರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯರಾಗಿಯೂ ಕೆಲಸ ಮಾಡಿದ್ದರು.  ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.

ಸದಾ ಹಸನ್ನುಖಿಯಾಗಿದ್ದ ಸರಳ, ಸಜ್ಜನಿಕೆಯ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿದ್ದ ಮುನಿಕೃಷ್ಣಪ್ಪ ಅವರು ಹೃದಯಾಘಾತದಿಂದ ಶುಕ್ರವಾರದಂದು ಇಹಲೋಕ ತ್ಯಜಿಸಿದ್ದಾರೆ.

ಸಂತಾಪ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಹಾವೇರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ , ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸೇರಿದಂತೆ ಪತ್ರಕರ್ತರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

Please follow and like us:
error