ಅಕ್ರಮ ಪಂಪ್‌ಸೆಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಿ : ಸಚಿವ ಆನಂದ ಸಿಂಗ್

ತುಂಗಭದ್ರಾ ಜಲಾಶಯ 115ನೇ ನೀರಾವರಿ ಸಲಹಾ ಸಮಿತಿ ಸಭೆ : ಜು. 18 ರಿಂದ ಕಾಲುವೆಗೆ ನೀರು


ಕೊಪ್ಪಳ : ಜುಲೈ 18ರಿಂದ ತುಂಗಭದ್ರಾ ಎಡದಂಡೆ ಕಾಲುವೆಗೆ ನೀರು ಬಿಡಲು ತೀರ್ಮಾನಿಸಿದ್ದು, ತುಂಗಭದ್ರಾ ಎಡ ಮತ್ತು ಬಲದಂಡೆ ಕಾಲುವೆಗಳಲ್ಲಿ ಅಕ್ರಮ ಪಂಪ್‌ಸೆಟ್‌ಗಳ ಮೂಲಕ ನೀರು ಎತ್ತುವವರ ವಿರುದ್ಧ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಸರ್ಕಾರದ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ ಸಚಿವರಾದ ಆನಂದ್ ಸಿಂಗ್ ಸೂಚನೆ ನೀಡಿದರು.
ಅವರು ಇಂದು ಸೋಮವಾರ (ಜು. 12) ಮುನಿರಾಬಾದ್‌ನ ತುಂಗಭದ್ರಾ ಕಾಡಾ ಸಭಾಂಗಣದಲ್ಲಿ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ 115ನೇ ನೀರಾವರಿ ಸಲಹಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತುಂಗಭದ್ರಾ ಎಡದಂಡೆಯ ಮೇಲೆ ಅಕ್ರಮ ಪಂಪ್‌ಸೆಟ್‌ಗಳ ಮೂಲಕ ನೀರು ಹೊಲಗಳಿಗೆ ಬಿಡುತ್ತಿರುವುದರಿಂದ ಎಡದಂಡೆಯ ಕೊನೆಯ ಭಾಗದ ರೈತರಿಗೆ ನೀರು ತಲುಪುತ್ತಿಲ್ಲ. ಹಾಗಾಗಿ ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಹಯೋಗದಲ್ಲಿ ತಂಡಗಳನ್ನು ರಚಿಸಿಕೊಂಡು, ಅಕ್ರಮ ಪಂಪ್‌ಸೆಟ್‌ಗಳನ್ನು ಜಪ್ತಿ ಮಾಡಿ, ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಇದರಿಂದ ನೀರು ಎಡದಂಡೆಯ ಕೊನೆಯ ಭಾಗದ ರೈತರಿಗೂ ತಲುಪುತ್ತದೆ. ಸಂಬAಧಿಸಿದ ಅಧಿಕಾರಿಗಳು ಕರ್ತವ್ಯದಲ್ಲಿ ನಿರ್ಲಕ್ಷö್ಯ ವಹಿಸಿದರೆ ಅಂತವರನ್ನು ಅಮಾನತ್ತು ಮಾಡಿ ಎಂದು ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜುಲೈ 18 ರಿಂದ ಕಾಲುವೆಗೆ ನೀರು;
ತುಂಗಭದ್ರಾ ಜಲಾಶಯದಿಂದ ಪ್ರಸಕ್ತ ವರ್ಷದ ಮುಂಗಾರು ಹಂಗಾಮು ಬೆಳೆಗೆ ಜುಲೈ 18 ರಿಂದ ನೀರು ಬಿಡುಗಡೆ ಮಾಡಲಾಗುವುದು. ಎಡದಂಡೆ ಮುಖ್ಯ ಕಾಲುವೆಗೆ ಜು. 18 ರಿಂದ 4100 ಕ್ಯೂಸೆಕ್, ಬಲದಂಡೆ ಮೇಲ್ಮಟ್ಟದ ಕಾಲುವೆಗೆ 1130 ಕ್ಯೂ., ಬಲದಂಡೆ ಕೆಳಮಟ್ಟದ ಕಾಲುವೆಗೆ 700 ಕ್ಯೂ. ನಂತೆ ನವೆಂಬರ್ 30 ರವರೆಗೆ, ರಾಯ ಬಸವ ಕಾಲುವೆಗೆ ಜೂನ್ 1ರಿಂದ ಡಿಸೆಂಬರ್ 10 ರವರೆಗೆ 235 ಕ್ಯೂ., ಎಡದಂಡೆ ಮೇಲ್ಮಟ್ಟದ ಕಾಲುವೆಗೆ ಜು. 18 ರಿಂದ 25 ಕ್ಯೂ.ನಂತೆ ನವೆಂಬರ್ 30 ರವರೆಗೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದರು.
ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಅವರು ಮಾತನಾಡಿ, ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಅಕ್ರಮ ಪಂಪ್‌ಸೆಟ್‌ಗಳಿದ್ದು, ಅವುಗಳನ್ನು ತಡೆಗಟ್ಟಿದಾಗ ಮಾತ್ರ ಕೆಳಭಾಗದ ರೈತರಿಗೆ ನೀರು ಬರುತ್ತವೆ. ಇಲ್ಲವಾದರೆ ರೈತರಿಗೆ ತಮ್ಮ ಬೆಳೆಗಳಿಗೆ ನೀರು ಉಣಿಸಲು ಕಷ್ಟವಾಗುತ್ತಿದ್ದು, ಅವರು ಮಳೆ ಬಂದಾಗಲೇ ಬೆಳೆಗಳನ್ನು ಬೆಳೆಯಬೇಕಾದ ಪರಿಸ್ಥಿತಿ ಇದೆ ಎಂದರು.
ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಅವರು ಮಾತನಾಡಿ, ಸಿಂಧನೂರು, ಮಾನ್ವಿ, ರಾಯಚೂರು ಈ ಭಾಗಕ್ಕೆ ನೀರು ಒದಗಿಸುವ ಕುರಿತು ಈ ಹಿಂದೆ ಮುಖ್ಯಮಂತ್ರಿಗಳ ಗಮನಕ್ಕೂ ತಂದು, ಶಿರವಾರದವರೆಗೂ ನೀರು ಹರಿಸಲಾಗಿತ್ತು. ನಾವು ಈ ಕುರಿತು ಗಮನ ಹರಿಸುತ್ತಿದ್ದೇವೆ ಎಂದು ಹೇಳಿದರು.
ಸಿಂಧನೂರು ಶಾಸಕರಾದ ವೆಂಕಟರಾವ್ ನಾಡಗೌಡ ಅವರು ಮಾತನಾಡಿ, ಎಡದಂಡೆ ಕೊನೆಯ ಭಾಗದ ರೈತರಿಗೆ ಬಹಳಷ್ಟು ಸಮಸ್ಯೆಗಳಿದ್ದು, ನೀರಿನ ಲಭ್ಯತೆಯೂ ಕೂಡಾ ಕಡಿಮೆ ಆಗುತ್ತಿರುವುದರಿಂದ ಶಿರವಾರದವರೆಗೂ ನೀರು ಸಿಗುವುದು ಕಷ್ಟವಾಗಿದೆ ಎಂದರು.
ತುAಗಭದ್ರಾ ಬಲದಂಡೆ ಕಾಲುವೆಗೆ 12 ತಿಂಗಳು ನೀರು ಹರಿಯುತ್ತದೆ. ಎಡದಂಡೆಗೆ ಹಲವಾರು ಅಕ್ರಮ ಪಂಪ್‌ಸೆಟ್‌ಗಳು ಇರುವುದರಿಂದ ಇಲ್ಲಿ ನೀರಿನ ಸಮಸ್ಯೆ ಇದೆ. ಕಾಲುವೆಗಳ ನಿರ್ವಹಣೆಗಾಗಿ ಗ್ಯಾಂಗ್‌ಮೆನ್ ಮತ್ತು ಇಂಜಿನಿಯರ್‌ಗಳ ಕೊರತೆ ಇದೆ. ಹಾಗಾಗಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.
ರೈತ ಭಾಂದವರಲ್ಲಿ ಮನವಿ;
ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಮಿತವ್ಯಯವಾಗಿ ಬಳಸಿ ಅಧಿಕೃತ ಅಚ್ಚುಕಟ್ಟು ಪ್ರದೇಶದಲ್ಲಿ ನಿಗಧಿತ ಬೆಳೆಗಳನ್ನು ಮಾತ್ರ ಬೆಳೆಯಲು ಹಾಗೂ ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸಲು ರೈತ ಭಾಂದವರಲ್ಲಿ ಕೋರಲಾಗಿದೆ. ಪ್ರಸಕ್ತ ಅಂದಾಜಿಸಿದ ನೀರಿನ ಪ್ರಮಾಣವು ತಾತ್ಕಾಲಿಕವಾಗಿದ್ದು, ತುಂಗಭದ್ರಾ ಜಲಾಶಯಕ್ಕೆ ಹರಿದು ಬರುವ ಒಳಹರಿವಿನ ಪ್ರಮಾಣದ ಮೇಲೆ ಆವಲಂಭಿತವಾಗಿದ್ದು, ಮುಂದೆ ಒಳ ಹರಿವಿನ ಪ್ರಮಾಣದಲ್ಲಿ ಕೊರತೆ ಉಂಟಾದಲ್ಲಿ ಪರಿಷ್ಕೃತ ಪ್ರಕಟಣೆಯನ್ನು ಪ್ರಕಟಿಸಲಾಗುವುದು ಎಂದು ಅಧೀಕ್ಷಕ ಅಭಿಯಂತರರಾದ ಎಲ್ ಬಸವರಾಜ್ ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ, ಬಳ್ಳಾರಿ ಸಂಸದ ವೈ. ದೇವೆಂದ್ರಪ್ಪ, ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ್, ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ವಿಧಾನ ಪರಿಷತ್ ಸದಸ್ಯ ಕೆ.ಸಿ ಕೊಂಡಯ್ಯ, ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ, ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ್, ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ, ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ, ಕಂಪ್ಲಿ ಶಾಸಕ ಜೆ.ಎನ್ ಗಣೇಶ್, ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್, ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ರಾಯಚೂರು ಅಪರ ಜಿಲ್ಲಾಧಿಕಾರಿ ದುರುಗೇಶ, ಮುನಿರಾಬಾದ್ ಕಾಡಾ ಕಚೇರಿಯ ಮುಖ್ಯ ಇಂಜಿನಿಯರ್ ಬಿ.ಆರ್. ರಾಥೋಡ್, ಅಧೀಕ್ಷಕ ಅಭಿಯಂತರರಾದ ಪ್ರಕಾಶ ಸೇರಿದಂತೆ ಕೊಪ್ಪಳ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರು ಮತ್ತು ನೀರಾವರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error