ಎಸ್.ಎಸ್.ಎಲ್.ಸಿ ಪರೀಕ್ಷೆ : ಜು. 13 ರಂದು ಪೂರ್ವಭಾವಿ ಸಭೆ


ಕೊಪ್ಪಳ, ): ಇದೇ ಜುಲೈ 19 ಹಾಗೂ 22 ರಂದು ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಯ ಕುರಿತು ಪೂರ್ವಭಾವಿ ಸಭೆಯನ್ನು ಜು. 13 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ವಹಿಸುವರು. ಈ ಸಭೆಗೆ ಜಿಲ್ಲಾ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದು, ಆದ್ದರಿಂದ ಅಧಿಕಾರಿಗಳು ಸಭೆಗೆ ಆಗಮಿಸಿ ಪರೀಕ್ಷೆಗಳು ವ್ಯವಸ್ಥಿತವಾಗಿ ನಡೆಯಲು ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು(ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error