ಹಿರಿಯ ಹೋರಾಟಗಾರ, ಮಾಜಿ ಸಂಸದ ಜಿ.ಮಾದೇಗೌಡ ನಿಧನ


ಮೈಸೂರು: ಕಾವೇರಿ ಹೋರಾಟಗಾರರು, ಹಿರಿಯ ಗಾಂಧಿವಾದಿ, ಮಾಜಿ ಸಂಸದ ಜಿ.ಮಾದೇಗೌಡ(93) ಇಂದು ರಾತ್ರಿ ನಿಧನರಾದರು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕೆಲ ದಿನಗಳಿಂದ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಶನಿವಾರ ರಾತ್ರಿ ನಿಧನರಾದರು.
ಮಂಡ್ಯದ ಬಂಧೀಗೌಡ ಬಡಾವಣೆ ನಿವಾಸಿಯಾಗಿದ್ದ ಮಾದೇಗೌಡರು, ಮದ್ದೂರು ತಾಲೂಕಿನ ಗುರುದೇವರ ಹಳ್ಳಿ ಗ್ರಾಮದವರು. ಮೃತರಿಗೆ ಪತ್ನಿ, ಡಾ.‌ ಪ್ರಕಾಶ್, ಮಧು ಮಾದೇಗೌಡ ಸೇರಿದಂತೆ ನಾಲ್ವರು ಪುತ್ರರು, ಪುತ್ರಿ ಇದ್ದಾರೆ.

Please follow and like us: