ಕೊರೊನಾ ಮೂರನೇ ಅಲೆ :ಮದುವೆ ಸಮಾರಂಭ ತಹಶೀಲ್ದಾರ ಅನುಮತಿ ಕಡ್ಡಾಯ

ಕೊರೊನಾ ಮೂರನೇ ಅಲೆಗೆ ಜಿಲ್ಲಾಡಳಿತ ಸಿದ್ಧತೆ; ಅಂಜನಾದ್ರಿ ಸೇರಿ ವಿವಿಧ ದೇವಸ್ಥಾನಗಳ ಪ್ರವೇಶ ನಿಷೇಧ
ಕೊಪ್ಪಳ,: ಅಂಜನಾದ್ರಿ ದೇವಸ್ಥಾನ ಸೇರಿದಂತೆ ಜಿಲ್ಲೆಯ ಎಲ್ಲ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶ, ಪ್ರವಾಸಿ ತಾಣಗಳಿಗೆ ಹಾಗೂ ತುಂಗಭದ್ರಾ ನದಿಯ ದಡದಲ್ಲಿ ಸಾರ್ವಜನಿಕರ ಭೇಟಿಯನ್ನು ನಿಷೇಧಿಸಲಾಗಿದ್ದು, ಕೋವಿಡ್-19 ಮೂರನೇ ಅಲೆಯನ್ನು ಎದುರಿಸಲು ಬೇಕಾದ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತದಿಂದ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಕೋವಿಡ್-19 ಮೂರನೇ ಅಲೆಯ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಕುರಿತು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕೋವಿಡ್ ಮೂರನೇ ಅಲೆ ನಿರ್ವಹಣೆಗೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಅದಕ್ಕೆ ಪೂರಕವಾಗಿ ಸಾರ್ವಜನಿಕರ ಸಹಕಾರ ಅಗತ್ಯ. ಕೋವಿಡ್ ನಿರ್ವಹಣೆಗೆ ಜಿಲ್ಲಾಡಳಿತ ಜಾರಿಗೊಳಿಸಿದ ಮಾರ್ಗಸೂಚಿಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ರಾಜ್ಯ ಸರ್ಕಾರ ಜಾರಿ ಮಾಡಿದ ನಿಯಮಗಳು ಜಿಲ್ಲೆಯಲ್ಲೂ ಜಾರಿಯಲ್ಲಿರುತ್ತವೆ. ಸಭೆ, ಮದುವೆ ಸಮಾರಂಭಗಳಿಗೆ ತಹಶೀಲ್ದಾರರ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಅಲ್ಲದೇ ಶ್ರಾವಣದಲ್ಲಿ ನಡೆಯುವ ಪುರಾಣ-ಪ್ರವಚನಗಳಿಗೆ ನಿರ್ಬಂಧ ಹೇರಲಾಗಿದೆ. ಗ್ರಾಮೀಣ ಭಾಗದ ಸಣ್ಣ ದೇವಸ್ಥಾನ ಹಾಗೂ ಮಸೀದಿಗಳಲ್ಲಿ ನಾಲ್ಕೆöÊದು ಜನರಿಗೆ ಪೂಜೆಗೆ ಅವಕಾಶ ನೀಡಲಾಗಿದೆ. 15-20 ಜನರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. 15 ದಿನಗಳವರೆಗೆ ಈ ನಿಯಮ ಜಾರಿಯಲ್ಲಿರುತ್ತವೆ ಎಂದು ಅವರು ತಿಳಿಸಿದರು.


ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟು 1200 ಬೆಡ್‌ಗಳು ಲಭ್ಯವಿದ್ದು, ಇದರಲ್ಲಿ 200 ಬೆಡ್‌ಗಳನ್ನು ಮಕ್ಕಳಿಗಾಗಿಯೇ ಮೀಸಲಿಡಲಾಗಿದೆ. ಅವಶ್ಯವಿರುವಂತಹ ಎಲ್ಲ ಉಪಕರಣಗಳನ್ನು ಖರೀದಿಸಲಾಗಿದ್ದು, ಕುಷ್ಟಗಿ ಹೊರತು ಪಡಿಸಿದರೆ ಎಲ್ಲ ತಾಲ್ಲೂಕುಗಳಲ್ಲಿ ಪಿಡೀಯಾಟ್ರಿಸ್ಟ್ಗಳನ್ನು ನೇಮಿಸಿದ್ದೇವೆ. ಖಾಸಗಿ ಆಸ್ಪತ್ರೆಯವರು ಮೂರನೇ ಅಲೆಗೆ ಬೆಡ್‌ಗಳನ್ನು ನೀಡಲು ಮುಂದೆ ಬಂದಿದ್ದು, ಆ ಖಾಸಗಿ ಆಸ್ಪತ್ರೆಯವರಿಗೆ ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿದ್ದೇವೆ. ಅದಕ್ಕೆ ಒಪ್ಪಿದರೆ ಮಾತ್ರ ಅವರಿಂದ ಸೇವೆ ಪಡೆಯುತ್ತೇವೆ. ಮಕ್ಕಳಿಗೆ ಸಂಬAಧಿಸಿದAತೆ 30 ಪೆಡಿಯಾಟ್ರಿಕ್ ವೆಂಟಿಲೇಟರ್‌ಗಳು ಇವೆ ಎಂದು ಮಾಹಿತಿ ನೀಡಿದರು.


18 ವರ್ಷ ಮೇಲ್ಪಟ್ಟವರೆಲ್ಲರೂ ಕೋವಿಡ್ ಲಸಿಕೆ ಪಡೆಯಲು ಅರ್ಹರಿದ್ದು, ಇಂದಿನಿAದ ಅರ್ಹರೆಲ್ಲರಿಗೂ ಕೋವಿಡ್-19 ಲಸಿಕೆ ಹಾಕಲಾಗುತ್ತಿದೆ. 12.90 ಲಕ್ಷ ಜನರಿಗೆ ಲಸಿಕೆ ಹಾಕಲು ಗುರಿಯನ್ನು ಹೊಂದಿದ್ದೇವೆ. ಇದರಲ್ಲಿ ಈಗಾಗಲೇ ಶೇ.40 ರಷ್ಟು ಜನರಿಗೆ ಲಸಿಕೆ ಹಾಕಿದ್ದೇವೆ. ರಾಜ್ಯ ಸರ್ಕಾರದಿಂದ ಪ್ರತಿದಿನ 6-8 ಸಾವಿರ ಲಸಿಕೆ ಬರುತ್ತಿದೆ. ಮುಂದಿನ ದಿನಗಳಲ್ಲಿ ಪ್ರತಿದಿನ ನೀಡಲಾಗುತ್ತಿರುವ ಲಸಿಕೆಯ ಪ್ರಮಾಣವನ್ನು ಹೆಚ್ಚಿಸಲಾಗುತ್ತದೆ. ಹಾಗಾಗಿ ಎಲ್ಲರೂ ಕೋವಿಡ್-19 ಲಸಿಕೆಗಳನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು. ಅಲ್ಲದೇ ಮೊದಲ ಡೋಸ್ ಪಡೆದವರೆಲ್ಲರೂ ಎರಡನೇ ಡೋಸ್ ಲಸಿಕೆಯನ್ನು ಕಡ್ಡಾಯವಾಗಿ ಪಡೆಯಬೇಕು. ಅಂದಾಗ ಮಾತ್ರ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದರಿಂದ ಕೊರೊನಾ ರೋಗ ಬರದಂತೆ ರಕ್ಷಣೆ ನೀಡುತ್ತದೆ ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.


ಬೇರೆ ರಾಜ್ಯಗಳಿಂದ ಬಂದ ಜಿಲ್ಲೆಯ ಗ್ರಾಮೀಣ ಭಾಗದ ಜನರಿಗೆ ಕೋವಿಡ್ ಟೆಸ್ಟ್ ಮಾಡಲು ಟಾಸ್ಕ್ ಫೋರ್ಸ್ನ್ನು ರಚಿಸಲಾಗಿದೆ. ಕೋವಿಡ್‌ನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡಲು ತಾಲ್ಲೂಕು ಮಟ್ಟದ ತಂಡ ರಚಿಸಿದ್ದೇವೆ. ಇ-ಜನ್ಮ ತಂತ್ರಾAಶ ಹಾಗೂ ಪರಿಹಾರ್ ಪೋರ್ಟಲ್‌ಗಳಲ್ಲಿ ದಾಖಲಾದ ಸಂಖ್ಯೆಗಳನ್ನು ಮರುಪರಿಶೀಲನೆ ಮಾಡಿ, ನಂತರ ಕೋವಿಡ್‌ನಿಂದ ಮೃತಪಟ್ಟವರ ಪಟ್ಟಿಯನ್ನು ತಯಾರಿಸುತ್ತೇವೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಫೌಜಿಯಾ ತರನ್ನುಮ್ ಮಾತನಾಡಿ, ಕೋವಿಡ್-19 ಮೂರನೇ ಅಲೆಗೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಜನರು ಭಯಪಡುವ ಅವಶ್ಯಕತೆ ಇಲ್ಲ. 18 ವರ್ಷದ ಒಳಗಿನ ಮಕ್ಕಳಿಗೆ ಸ್ಕಿçÃನಿಂಗ್ ಮಾಡುತ್ತಿದ್ದೇವೆ. ಅಪೌಷ್ಟಿಕ ಮಕ್ಕಳನ್ನು ಗುರುತಿಸಿ, ಎನ್.ಆರ್.ಸಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಇನ್ನು ಮುಂದೆ ಮನೆಗಳಿಗೆ ತೆರಳಿ ವೈದ್ಯರು ತಪಾಸಣೆ ಮಾಡುತ್ತಾರೆ. ಅವಶ್ಯಕತೆ ಇದ್ದರೆ ಚಿಕಿತ್ಸೆ ನೀಡುತ್ತಾರೆ. ಬೇರೆ ಜಿಲ್ಲೆ ಹಾಗೂ ರಾಜ್ಯದಿಂದ ಬಂದವರನ್ನು ಗುರುತಿಸಿ, ಮಾಹಿತಿ ಕಲೆ ಹಾಕಿ, ಕೋವಿಡ್-19 ಪರೀಕ್ಷೆ ಮಾಡಿಸಿ, ಐಸೋಲೇಷನ್ ಮಾಡುತ್ತಿದ್ದೇವೆ. 77 ಸ್ಯಾಮ್ ಮಕ್ಕಳು ಈಗಾಗಲೇ ಎನ್.ಆರ್.ಸಿ ಕೇಂದ್ರದಲ್ಲಿ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಕ್ಕೆ ಸಾರ್ವಜನಿಕರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಮಾತನಾಡಿ, ಮೂರನೇ ಅಲೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಕಾರ್ಯಪ್ರವೃತ್ತವಾಗಿದೆ. ಈ ನಿಟ್ಟಿನಲ್ಲಿ ಪ್ರೇಕ್ಷಣೀಯ ಸ್ಥಳಗಳು, ಧಾರ್ಮಿಕ ಸ್ಥಳಗಳು, ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ. ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಮಹಾರಾಷ್ಟç, ತೆಲಂಗಾಣ ಮತ್ತು ಆಂಧ್ರಪ್ರದೇಶದ ಜನರು ಆಗಮಿಸುವುದರಿಂದ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ. ತುಂಗಭದ್ರಾ ನದಿಪಾತ್ರ ಪ್ರದೇಶದಲ್ಲಿ, ತುಂಗಭದ್ರಾ ಹಿನ್ನೀರು ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಿದ್ದೇವೆ. ಕೇರಳ ಸೇರಿದಂತೆ ವಿವಿಧ ರಾಜ್ಯದಿಂದ ಬರುವ ಜನರನ್ನು ಗುರುತಿಸಿ ಐಸೋಲೇಷನ್ ಹಾಗೂ ಸ್ಕಿçÃನಿಂಗ್‌ಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಹುಬ್ಬಳ್ಳಿ ರಸ್ತೆ, ಬಾಗಲಕೋಟೆ ರಸ್ತೆ ಮತ್ತು ಬಳ್ಳಾರಿ ರಸ್ತೆಗಳಲ್ಲಿ ಚೆಕ್‌ಪೋಸ್ಟ್ ತೆರೆಯಲಾಗುತ್ತದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜ ಟಿ., ಸೇರಿದಂತೆ ಇತರರು ಉಪಸ್ಥಿತರಿದ್ದರು.

Please follow and like us:
error