ಆ. 18 ರವರೆಗೆ ಕನಕಾಚಲಪತಿ ದೇವಸ್ಥಾನಕ್ಕೆ ಭಕ್ತಾಧಿಗಳಿಗೆ ನಿಷೇಧ

ಕೊಪ್ಪಳ : ಕೋವಿಡ್-19 ಸೋಂಕು ತಡೆಯಲು ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಕನಕಾಚಲಪತಿ ದೇವಸ್ಥಾನಕ್ಕೆ ಇಂದಿನಿAದ ಆಗಸ್ಟ್ 18 ರವರೆಗೆ ಭಕ್ತಾಧಿಗಳ ಪ್ರವೇಶವನ್ನು ಸಿ.ಆರ್.ಪಿ.ಸಿ 1973ರ ಕಲಂ 144 ರನ್ವಯ ನಿಷೇದಾಜ್ಞೆ ಜಾರಿಗೊಳಿಸಿ ಕೊಪ್ಪಳ ಉಪವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರು ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕ ಹಾಗೂ ಭಕ್ತಾಧಿಗಳ ಆರೋಗ್ಯ ಹಿತದೃಷ್ಠಿಯಿಂದ ಜಿಲ್ಲೆಯಲ್ಲಿ ಕೋವಿಡ್-19 ಹರಡುವಿಕೆ ತಡೆಯುವ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಸಿ.ಆರ್.ಪಿ.ಸಿ 1973 ಕಲಂ 144ರನ್ವಯ ಆಗಸ್ಟ್ 03 ರಿಂದ 18ರ ರಾತ್ರಿ 12 ಘಂಟೆಯವರೆಗೆ 15 ದಿನಗಳ ಕಾಲ ಕನಕಾಚಲಪತಿ ದೇವಸ್ಥಾನದ ಸುತ್ತ-ಮುತ್ತಲಿನ ಪ್ರೆದೇಶದಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯವರು ದೇವಸ್ಥಾನದಲ್ಲಿ ನಡೆಯುವ ದಿನನಿತ್ಯದ ಧಾರ್ಮಿಕ ವಿಧಿ-ವಿಧಾನಗಳನ್ನು ಎಲ್ಲಾ ಮುಂಜಾಗ್ರತಾ ಕ್ರಮವಹಿಸಿ ನಡೆಸಲು ವಿನಾಯತಿ ನೀಡಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ಹಾಗೂ ಭಾರತೀಯ ದಂಡ ಸಂಹಿತೆ 188ರ ಪ್ರಕಾರ ಕ್ರಮ ಜರುಗಿಸಲಾಗುವುದು. ಈ ಆದೇಶವನ್ನು ಕನಕಾಚಲಪತಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ಉಪಾಧೀಕ್ಷಕರು (ಡಿವೈಎಸ್‌ಪಿ) ಗಂಗಾವತಿ, ಕನಕಗಿರಿ ತಹಶೀಲ್ದಾರ್ ಮತ್ತು ಸಂಬAಧಪಟ್ಟ ಎಲ್ಲಾ ಇಲಾಖೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.

Please follow and like us:
error