ಸಂಘದಿಂದ ಸಸಿ ನೆಡುವ ಕಾರ್ಯಕ್ರಮ

ಕೊಪ್ಪಳ:- ನಗರದ ಬಿ.ಟಿ. ಪಾಟೀಲ ನಗರದಲ್ಲಿರುವ ವಿಠ್ಠಲ ಕೃಷ್ಣ ದೇವಸ್ಥಾನ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಪರಿಸರ ಮಾಹಿತಿ ಹಾಗೂ ಸಸಿ ನೆಡುವ ಕಾರ್ಯಕ್ರಮ ಜರುಗಿತು.
ಗ್ರಾಮಾಭಿವೃದ್ದಿ ಸಂಸ್ಥೆಯ ಪರಿಸರ ರಕ್ಷಣೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಲ್ಲಿ ಸಸಿ ನೆಡುವ ಕಾರ್ಯಕ್ರಮವೂ ಒಂದು. ಇಂತಹ ಸಂದರ್ಭದಲ್ಲಿ ಸಸಿ ನೆಟ್ಟು ಪರಿಸರ ರಕ್ಷಣೆ ಮತ್ತು ಪೋಷಣೆ ಮಾಡುವ ನಿಟ್ಟಿನಲ್ಲಿ ಮಹಿಳೆಯರಲ್ಲಿ ಮತ್ತು ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಉತ್ತಮವಾದ ಕೆಲಸ ಎಂದು ದೇವಸ್ಥಾನ ಸಮಿತಿ ಉಪಾಧ್ಯಕ್ಷ ಮಂಜುನಾಥ ಹಳ್ಳಿಕೇರಿ ಅವರು ಹೇಳಿದರು. ಈ ಸಂದರ್ಭದಲ್ಲಿ ತಿರುಮಲರಾವ್ ದೇಶಪಾಂಡೆ, ಒಕ್ಕೂಟದ ಅಧ್ಯಕ್ಷೆ ಉಮಾ, ಮೇಲ್ವಿಚಾರಕರಾದ ಸಾವಿತ್ರಿ, ಸೇವಾ ಪ್ರತಿನಿಧಿ ಲೀಲಾವತಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು

Please follow and like us:
error