ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

: 2019-20 ಮತ್ತು 2020-21ನೇ ಸಾಲಿನ ಸಿಬಿಎಸ್‌ಸಿ, ಐಸಿಎಸ್‌ಸಿ ಯಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹ ಧನ ಮಂಜೂರು ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೇ.60 ರಿಂದ 74.99 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರೂ.7000, ಶೇ.75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರೂ.15,000 ಗಳ ಪ್ರೋತ್ಸಾಹಧನವನ್ನು ಮಂಜೂರು ಮಾಡಲಾಗುತ್ತದೆ.
ಇಲಾಖೆಯ ಪೋರ್ಟಲ್ SಒIS ನಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಅದಕ್ಕಾಗಿ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಆನ್‌ಲೈನ್ ಮೂಲಕ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಕೊಪ್ಪಳ, ಗಂಗಾವತಿ, ಕುಷ್ಟಗಿ, ಯಲಬುರ್ಗಾ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಗಂಗಾವತಿ, ಕುಷ್ಟಗಿ ತಾಲ್ಲೂಕು ಕಚೇರಿಗಳಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಯ ದೃಢೀಕೃತ ದಾಖಲೆಗಳನ್ನು (ಸಂಬAಧಿಸಿದ ಮುಖ್ಯೋಪಾಧ್ಯಾಯರಿಂದ ದೃಢೀಕರಿಸುವುದು) ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಮತ್ತು ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ ಕೊಪ್ಪಳ, ಗಂಗಾವತಿ, ಕುಷ್ಟಗಿ, ಯಲಬುರ್ಗಾ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಗಂಗಾವತಿ, ಕುಷ್ಟಗಿ ತಾಲ್ಲೂಕು ಕಚೇರಿಗಳಿಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಪ್ರೋತ್ಸಾಹ ಧನ: ಅರ್ಜಿ ಆಹ್ವಾನ
: 2020-21ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನಿಯರಿAಗ್, ಇತರೆ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹಧನ ಮಂಜೂರು ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ www.sw.kar.nic.in ನಲ್ಲಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ www.tw.kar.nic.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ಅವಧಿ ನಂತರ ಸ್ವೀಕೃತವಾಗುವ ಯಾವುದೇ ಮ್ಯಾನುವಲ್ ಅರ್ಜಿ, ಕೋರಿಕೆಗಳನ್ನು ಪರಿಗಣಿಸಲು ಅವಕಾಶವಿರುವುದಿಲ್ಲ.
ಹೆಚ್ವಿನ ಮಾಹಿತಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಮತ್ತು ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ ಕೊಪ್ಪಳ, ಗಂಗಾವತಿ, ಕುಷ್ಟಗಿ, ಯಲಬುರ್ಗಾ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಗಂಗಾವತಿ, ಕುಷ್ಟಗಿ ತಾಲ್ಲೂಕು ಕಚೇರಿಗಳಿಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Please follow and like us:
error